ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಎಚ್.ಡಿ.ಬಿ.ಆರ್.ಟಿ.ಎಸ್. ಘಟಕದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು.
ಈ ವೇಳೆ ನೂತನ ೧೨೭ ಬಸ್ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಲೋಕಾರ್ಪಣೆ ಮಾಡಿದರು. ಈ ಬಸ್ಗಳು ಭಾರತ್ ಸ್ಟೇಜ್ 6 ಮಾದರಿ ಬಸ್ಗಳಾಗಿದ್ದು ಇದರಲ್ಲಿ ಸಿಸಿ ಕ್ಯಾಮರಾಗಳು, ಎಲ್ಇಡಿ ಸ್ಕ್ರೀನ್ಗಳು ಮತ್ತು ಸುರಕ್ಷತಾ ಬಟನ್ಗಳು ಒಳಗೊಂಡಿವೆ. ರಾಜ್ಯದ ಜನರಿಗೆ ಅತ್ಯುತ್ತಮ ಸಾರಿಗೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ.
ರೈತರೇ ಗಮನಿಸಿ.. ಕಡಿಮೆ ಬಂಡವಾಳ, ಅಧಿಕ ಲಾಭ! ಈ ಬೆಳೆಯಿಂದ ಲಕ್ಷಗಟ್ಟಲೆ ಲಾಭ ಪಡೆಯಬಹುದು!
ಅವಧಿ ಮೀರಿದ ಬಸ್ಗಳನ್ನು ಸ್ಥಗಿತಗೊಳಿಸಿ ಹೊಸ ಬಸ್ಗಳನ್ನು ಖರೀದಿಸಲಾಗುತ್ತದೆ. ಈ ವರ್ಷವು ಹಳೇ ಬಸ್ಗಳನ್ನು ಸ್ಕ್ರಾಪ್ಗೆ ಹಾಕಿ, ಬೇಡಿಕೆ ಮತ್ತು ಸಂಚಾರ ದಟ್ಟಣೆಗೆ ಅನುಗುಣವಾಗಿ ಹೊಸ ಬಸ್ಗಳು ಸಂಚರಿಸಲಿವೆ. ಶಾಸಕ ಪ್ರಸಾದ ಅಬ್ಬಯ್ಯ, ಭರಮಗೌಡ ಕಾಗೆ, ಡಿಸಿ ದಿವ್ಯ ಪ್ರಭು ಜೆಆರ್ ಜೆ, ಇತರರು ಇದ್ದರು.