ರಾಜ್ಯಾದ್ಯಂತ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಮಾರಾಟ ಮತ್ತು ವಿಸರ್ಜನೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ನೀರಿನ ಮೂಲಗಳನ್ನು ರಕ್ಷಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ನ್ಯಾಯ ಮಂಡಳಿಯು ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಆದೇಶ ನೀಡಿತ್ತು.
ಅದರಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಯಾವುದೇ ಬಣ್ಣ ಸಹಿತ ಪಿಒಪಿ ವಿಗ್ರಹಗಳನ್ನು ಯಾವುದೇ ನೀರಿನ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ.