ಬೀಜಿಂಗ್: ಚೀನಾದಲ್ಲಿ ಹೊಸ ವೈರಸ್ ಆರ್ಭಟ ಜೋರಾಗಿದ್ದು, ಸಾವಿರಾರು ಮಂದಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕೋವಿಡ್ ತವರು ದೇಶ ಚೀನಾದಲ್ಲಿ ಹೆಚ್ಎಂಪಿವಿ ಹೆಸರಿನ ಹೊಸ ವೈರಸ್ ವಿಜೃಂಭಿಸುತ್ತಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಜಗತ್ತು ಮತ್ತೆ ಆತಂಕಕ್ಕೆ ಒಳಗಾಗಿದೆ.
ಇದರ ಬೆನ್ನಲ್ಲೇ ಚೀನಾದಲ್ಲಿಕಂಡು ಬಂದಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧಿಕಾರಿ ಡಾ ಅತುಲ್ ಗೋಯೆಲ್ ಹೇಳಿದ್ದಾರೆ. ಈ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಉಸಿರಾಟದ ಸೋಂಕುಗಳ ವಿರುದ್ಧ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಸಾಕು ಎಂದು ತಿಳಿಸಿದರು.
ದಾಲ್ಚಿನ್ನಿ ಎಲೆ ಅಡುಗೆಗೆ ಮಾತ್ರವಲ್ಲ ದೇಹಕ್ಕೂ ನೀಡುತ್ತದೆ ಆರೋಗ್ಯಕಾರಿ ಪ್ರಯೋಜಗಳು!
ನಾವು ದೇಶದಲ್ಲಿ ಉಸಿರಾಟಕ್ಕೆ ಸಂಬಂಧಿಸಿದಂತೆ ದಾಖಲಾದ ರೋಗಿಗಳ ಡೇಟಾವನ್ನು ವಿಶ್ಲೇಷಿಸಿದ್ದೇವೆ. ಡಿಸೆಂಬರ್ 2024ರ ಡೇಟಾದಲ್ಲಿ ಯಾವುದೇ ಗಣನೀಯ ಹೆಚ್ಚಳ ಕಂಡುಬಂದಿಲ್ಲ. ನಮ್ಮ ಯಾವುದೇ ಸಂಸ್ಥೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೇಸ್ ದಾಖಲಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದರು.
HMPVಗೆ ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಇಲ್ಲ, ಆದ್ದರಿಂದ ಅದರ ಹರಡುವಿಕೆಯನ್ನು ನಿಯಂತ್ರಿಸಲು ತಡೆಗಟ್ಟುವಿಕೆ ಮುಖ್ಯವಾಗಿದೆ. ಚೀನಾದಲ್ಲಿ HMPV ಏಕಾಏಕಿ ಹರಡಿರುವ ಬಗ್ಗೆ ಸುದ್ದಿಗಳಿವೆ. ಇದು ಯಾವುದೇ ಇತರ ಉಸಿರಾಟದ ವೈರಸ್ನಂತೆ ಸಾಮಾನ್ಯ ಶೀತವನ್ನು ಉಂಟುಮಾಡುತ್ತದೆ ಮತ್ತು ವಯಸ್ಸಾದವರಲ್ಲಿ ಮತ್ತು ಚಿಕ್ಕವರಲ್ಲಿ ಇದು ಜ್ವರಕ್ಕೆ ಕಾರಣವಾಗಬಹುದು ಎಂದು ವಿವರಿಸಿದರು.
ಚಳಿಗಾಲದಲ್ಲಿ ಉಸಿರಾಟದ ವೈರಸ್ ಸೋಂಕುಗಳು ಉಲ್ಬಣವಾಗುವುದು ಸಾಮಾನ್ಯ. ಯಾರಿಗಾದರೂ ಕೆಮ್ಮು ಮತ್ತು ಶೀತ ಇದ್ದರೆ ಅವರು ಇತರ ಜನರೊಂದಿಗೆ ಸಂಪರ್ಕಕ್ಕೆ ಬರುವುದನ್ನು ತಪ್ಪಿಸಬೇಕು. ಕೆಮ್ಮು, ಶೀತ ಬಂದಾಗ ಪ್ರತ್ಯೇಕ ಕರವಸ್ತ್ರ ಅಥವಾ ಟವೆಲ್ ಬಳಸಿ ಎಂದು ಸಲಹೆ ನೀಡಿದರು.