ಚಾಮರಾಜನಗರ:- ಹೊಸ ವರ್ಷದಂದು ಮಲೆಮಹದೇಶ್ವರನಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಪೂಜೆ ಸಲ್ಲಿಸಿದ್ದಾರೆ.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ ಅವರು, 2024 ರ ಜನವರಿ 1 ರಂದು ರಾತ್ರಿ ಮಲೆಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಮಾದಪ್ಪನಿಗೆ ಹೊಸ ವರ್ಷದಂದು ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.
ಸಚಿವ ಕೆ.ವೆಂಕಟೇಶ್ ಅವರು, ಇಂದು ಬೆಳಿಗ್ಗೆ ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮದ್ಯಾಹ್ನ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಆಗಮಿಸಲಿದ್ದಾರೆ.
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಮಧ್ಯಾಹ್ನ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.