ರನ್ ಮಷಿನ್ ವಿರಾಟ್ ಕೊಹ್ಲಿ ಸ್ಪೋಟಕ ಬ್ಯಾಟಿಂಗ್ ಗೆ ನ್ಯೂಜಿಲೆಂಡ್ ಬೌಲರ್ಸ್ ಬೆಚ್ಚಿ ಬಿದ್ದಿದ್ದಾರೆ.
Muda Scam: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ!
ಮೊದಲ ಟೆಸ್ಟ್ನಲ್ಲಿ ನ್ಯೂಜಿಲೆಂಡ್ ತಂಡ ನೀಡಿದ ಬೃಹತ್ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ ಎಚ್ಚರಿಕೆಯ ಬ್ಯಾಟಿಂಗ್ ಮಾಡುತ್ತಿದೆ. 2ನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 3 ವಿಕೆಟ್ ನಷ್ಟಕ್ಕೆ 231 ರನ್ ಕಲೆ ಹಾಕಿದೆ.
ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್ಗೆ ಬಂದ ವಿರಾಟ್ ಕೊಹ್ಲಿ ಎಚ್ಚರಿಕೆಯ ಆಟವಾಡಿದ್ರು. ಆರಂಭದಿಂದಲೂ ತಾಳ್ಮೆಯಿಂದ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ಬೌಲರ್ಗಳನ್ನು ಕಾಡಿದ್ರು.
ಕಿವೀಸ್ ಬೌಲರ್ಗಳ ಕಿವಿ ಹಿಂಡಿದ ಕೊಹ್ಲಿ ಅಬ್ಬರಿಸಿದ್ರು. ಕ್ರೀಸ್ನಲ್ಲಿ ಸಮಯ ಕಳೆಯುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್ ಮಾಡಿದ್ರು ಕೊಹ್ಲಿ. ತಾನು ಎದುರಿಸಿದ 102 ಬಾಲ್ನಲ್ಲಿ 70 ರನ್ ಸಿಡಿಸಿದ್ರು. ಬರೋಬ್ಬರಿ 8 ಫೋರ್, 1 ಸಿಕ್ಸರ್ ಸಿಡಿಸಿದ್ರು