ಬೆಂಗಳೂರು: ಸದ್ಯ ರಾಜ್ಯದಲ್ಲಿ ಡೆಂಗ್ಯೂ ಜೊತೆ ನಿಫಾ ವೈರಸ್ ಆತಂಕ ಶುರುವಾಗಿದೆ. ಇತ್ತ ನಗರದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಟಿ ಜಿಟಿ ಮಳೆಯಿಂದಾಗಿ ಡೆಂಗ್ಯೂ ತಾಂಡವವಾಡುತ್ತಿದೆ. ಇದೆಲ್ಲದರ ಮಧ್ಯೆ ಇದೀಗ ಕರ್ನಾಟಕಕ್ಕೆ ನಿಫಾ ಕಂಟಕ ಎದುರಾಗಿದೆ. ಕೇರಳದ ಮಲಪ್ಪುರಂನಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ ದೃಢವಾಗಿದೆ. ಹಾಗಾಗಿ ಸದ್ಯ ರಾಜ್ಯದಲ್ಲಿ ಡೆಂಗ್ಯೂ ಜೊತೆ ನಿಫಾ ವೈರಸ್ ಆತಂಕ ಶುರುವಾಗಿದೆ.
Gold Price: ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ !
ನಿಫಾ ಇರೋದನ್ನ ಆರೋಗ್ಯ ಸಚಿವರು ದೃಢಪಡಿಸಿದ್ದಾರೆ. ನಿಫಾ ಸೋಂಕಿತ ಬಾಲಕನನ್ನು ಕೊಯಿಕ್ಕೋಡ್ ಆಸ್ಪತ್ರೆಯ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನ ಮನೆಯವರು ಮಾಸ್ಕ್ ಧರಿಸುವಂತೆ ನಿರ್ದೇಶನ ನೀಡಲಾಗಿದೆ. ಬಾವಲಿ ಮತ್ತು ಹಂದಿಗಳ ದೈಹಿಕ ದ್ರವದ ಮೂಲಕ ನಿಫಾ ವೈರಸ್ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೂ ವೈರಸ್ ಹರಡಿದ ಉದಾಹರಣೆ ಇದೆ
ನಿಫಾ ವೈರಸ್ ತಗುಲಿದಾಗ ಮೊದಲಿಗೆ ಜ್ವರ ಕಾಣಿಸಿಕೊಳ್ಳುತ್ತೆ. ಉಸಿರಾಟದ ತೊಂದರೆ, ತಲೆನೋವು, ವಾಂತಿ ಆಗುತ್ತದೆ. ಮೆದುಳಿನ ಉರಿಯೂತ, ದೇಹದಲ್ಲಿ ಸೆಳೆತ ಉಂಟಾಗಬಹುದು. ಸೋಂಕಿತ ವ್ಯಕ್ತಿ ಕೋಮಾ ಸ್ಥಿತಿಗೆ ಜಾರಿ ಮೃತಪಡಬಹುದು.