ಬೆಂಗಳೂರು: ರೂಪಾಂತರಿ ಓಮಿಕ್ರಾನ್ ನಿಯಂತ್ರಣದ ಸಲುವಾಗಿ ಇಂದಿನಿಂದ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ. ಹೀಗಾಗಿ ಮುಂಚಿತವಾಗಿ ಬೆಂಗಳೂರು ಪೊಲೀಸರು ಫೀಲ್ಡಿಗೆ ಇಳಿದಿದ್ದು, ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಅದರಂತೆ ಕೆ.ಆರ್ ಮಾರುಕಟ್ಟೆ, ಉಪ್ಪಾರಪೇಟೆ ಸುತ್ತಮುತ್ತಲಿನ ಸ್ಥಳಗಳಲ್ಲಿ ಹೊಯ್ಸಳ ವಾಹನಗಳಲ್ಲಿ ತೆರಳಿ ಕರ್ಫ್ಯೂ ಸಂಬಂಧ ಜಾಗೃತಿ ಮೂಡಿಸುತ್ತಿದ್ದಾರೆ.
ರಾತ್ರಿ 10 ಗಂಟೆಯೊಳಗೆ ಎಲ್ಲರೂ ಮನೆ ಸೇರಿಕೊಳ್ಳಬೇಕು ಹಾಗೂ ಅನಾವಶ್ಯಕವಾಗಿ ತಿರುಗಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುದು ಎಂದು ಹೊಯ್ಸಳ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಇನ್ನೂ ರಾಜ್ಯದಲ್ಲಿ 10 ದಿನಗಳ ಕಾಲ ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿ ಇರಲಿದೆ ಎಂದು ಹೇಳಲಾಗಿದೆ.
