ಬೆಂಗಳೂರು: ರಾಜ್ಯದಲ್ಲಿ ವಿಧಿಸಲಾಗಿರುವ ನೈಟ್ ಕರ್ಫ್ಯೂ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಪ್ರತಿಕ್ರಿಯೆ ನೀಡಿ ದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಟ್ ಕರ್ಫ್ಯೂ ಸರ್ಕಾರದ ಆದೇಶ ಪ್ರಕಾರ ಇರಲಿದ್ದು, ನಿಯಮ ಮೀರಿದವರಿಗೆ ಕಠಿಣ ಶಿಕ್ಷೆ ಗ್ಯಾರಂಟಿ ಎಂದು ಖಡಕ್ಕಾಗಿ ವಾರ್ನಿಂಗ್ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಹೀಗಾಗಿ ಹೆಚ್ಚಿನ ಬಿಗಿ ಭದ್ರತೆಗಳನ್ನು ಕೈಗೊಳ್ಳಲಾಗಿದೆ ಹೀಗಾಗಿ ಜನರು ಸರ್ಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ, ಓಮಿಕ್ರಾನ್ ನಿಯಂತ್ರಣ ಮಾಡುವುದಕ್ಕೆ ಸಹಕರಿಸಬೇಕು ಎಂದು ಗೌರವ್ ಗುಪ್ತಾ ಮನವಿ ಮಾಡಿದ್ದಾರೆ.
