ಮಂಡ್ಯ:- ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತ ಎನ್ನಲಾಗಿದ್ದು, ಮಾರ್ಚ್ 25ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ಹೌದು…ನಿಖಿಲ್ ಕಣಕ್ಕಿಳಿಯುವ ಬಗ್ಗೆ ಪರೋಕ್ಷವಾಗಿ ಎಚ್ಡಿ ಕುಮಾರಸ್ವಾಮಿ ಖಚಿತಪಡಿಸಿದ್ದಾರೆ.
ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಮಂಡ್ಯದಲ್ಲಿ ಕುಮಾರಸ್ವಾಮಿ, ಜೆಡಿಎಸ್ ನಾಯರು, ಮುಖಂಡರ ಜೊತೆ ಸಭೆ ಮಾಡಿದ್ದು, ಸಭೆಯಲ್ಲಿ ಎಲ್ಲಾ ನಾಯಕರು ಕುಮಾರಸ್ವಾಮಿ ಇಲ್ಲ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ಮಾತನಾಡಿರುವ ಕುಮಾರಸ್ವಾಮಿ, ನಿಮಗೆ ನಿಖಿಲ್ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ. ಮಾರ್ಚ್ 21ಕ್ಕೆ ನನಗೆ ಆಪರೇಷನ್ ಇದೆ. ಆದ್ದರಿಂದ ಮಾರ್ಚ್ 25ರಂದು ಮಂಡ್ಯಕ್ಕೆ ಬಂದು ಅಭ್ಯರ್ಥಿ ಘೋಷಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪರೋಕ್ಷವಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಮಂಡ್ಯದಿಂದ ಕಣಕ್ಕಿಳಿಸುತ್ತೇನೆ ಎಂದು ಹೇಳಿದರು. ಇದರೊಂದಿಗೆ ಮಂಡ್ಯ ಜೆಡಿಎಸ್ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಂತಾಗಿದೆ.