ಬೆಂಗಳೂರು:- ಚನ್ನಪಟ್ಟಣದಲ್ಲಿ ನಿಖಿಲ್ ಗೆಲುವು ನಿಶ್ಚಿತ, ಬೇರೆಯವರ ಬಗ್ಗೆ ಮಾತನಾಡಲು ಇಷ್ಟ ಪಡಲ್ಲ ಎಂದು ಮಾಜಿ ಸಿಎಂ BS ಯಡಿಯೂರಪ್ಪ ಹೇಳಿದ್ದಾರೆ
ಉಪಚುನಾವಣೆ: ಮುಸ್ಲಿಂ ವ್ಯಕ್ತಿಗೆ ಶಿಗ್ಗಾಂವಿ ಟಿಕೆಟ್ ನೀಡಿದ ಕಾಂಗ್ರೆಸ್!
ನಿಖಿಲ್ ಕುಮಾರಸ್ವಾಮಿಯವರನ್ನು ಚನ್ನಪಟ್ಟಣದ ಎನ್ಡಿಎ ಅಭ್ಯರ್ಥಿ ಎಂದು ಘೋಷಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಇದೆ. ಮೋದಿಯವರ ಪಕ್ಷದಿಂದ ಬೆಂಬಲ ಇರುವ ಕಾರಣ ಅವರಿಗೆ ಗೆಲುವು ಖಚಿತ. ಕುಮಾರಸ್ವಾಮಿ, ಅಶೋಕ್ ಅವರು ಮತ್ತು ಎಲ್ಲಾ ಮುಖಂಡರು ಒಟ್ಟಾಗಿ ಸೇರಿದ್ದೇವೆ. ಇದು ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯಲ್ಲ. ಚುನಾವಣೆಯಲ್ಲಿ ಗೆದ್ದು ಬಂದ ಬಳಿಕ ನಿಮ್ಮನ್ನು ಭೇಟಿ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿಖಿಲ್ ಕುಮಾರಸ್ವಾಮಿಯವರು ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ಎನ್ಡಿಎ ಪಕ್ಷಗಳಾದ ಬಿಜೆಪಿ- ಜೆಡಿಎಸ್ ಪಕ್ಷಗಳ ಎಲ್ಲಾ ಪ್ರಮುಖರು ಒಟ್ಟಾಗಿ ಅಲ್ಲಿ ಪ್ರವಾಸ ಮಾಡುತ್ತೇವೆ. ನಂಬಿಕೆ ದ್ರೋಹಿಗಳಿಗೆ ಜನ ಪಾಠ ಕಲಿಸ್ತಾರೆ. ನಾನು ಬೇರೆಯವರ ಬಗ್ಗೆ ಒಂದು ಶಬ್ದ ಮಾತನಾಡಲು ಇಷ್ಟ ಪಡುವುದಿಲ್ಲ. ಪಕ್ಷಾಂತರ ಮಾಡಿದವರ ಬಗ್ಗೆ ಮಾತನಾಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.