ಬೆಂಗಳೂರು::-ಏಕಾಏಕಿ ಕೆಪಿಸಿಸಿ ಕಚೇರಿಗೆ ಬಂದ ಬಿಜೆಪಿ ನಾಯಕ ಯೋಗೇಶ್ವರ್ ಪುತ್ರಿ ಡಿಕೆಶಿ ಮುಂದೆ ಕಣ್ಣೀರಿಟ್ಟ ಪ್ರಸಂಗ ಜರುಗಿದೆ.
ಈ ಮೂಲಕ ಬಿಜೆಪಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ -ಡಾ.ಕೆ.ಎನ್.ವೇಣುಗೋಪಾಲ್
ಇದನ್ನು ನೋಡಿದ ಡಿಕೆ ಶಿವಕುಮಾರ್ ಕೂಡಲೇ ನಿಶಾ ಅವರನ್ನ ಕರೆದು ಮಾತನಾಡಿಸಿದ್ದಾರೆ. ಈ ವೇಳೆ ನಿಶಾ ಅವರು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಡಿಕೆ ಶಿವಕುಮಾರ್ ಮುಂದೆ ಕಣ್ಣೀರಿಟ್ಟಿದ್ದಾರೆ. ಆದ್ರೆ, ಇದನ್ನು ಡಿಕೆ ಶಿವಕುಮಾರ್ ತಿರಸ್ಕರಿಸಿದ್ದು, ತಲೆಯಲ್ಲಿ ಏನೋ ಇದೆ, ನೋಡುತ್ತೇನೆ ಹೋಗಮ್ಮಾ ಎಂದು ಹೇಳಿ ಕಳುಹಿಸಿದ್ದಾರೆ. ಆದರೆ, ನಿಶಾ ಯೋಗೇಶ್ವರ್ ಮಾತ್ರ ತಮ್ಮನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳಬೇಕು ಎಂದು ಪಟ್ಟು ಹಿಡಿದು ಕಣ್ಣೀರಿಟ್ಟಿದ್ದಾರೆ.
ಇತ್ತೀಚೆಗಷ್ಟೇ ಯೋಗೇಶ್ವರ್ ಪುತ್ರಿ ನಿಶಾ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಿದಾಡಿದ್ದವು. ಇದರಿಂದ ಈ ಬಗ್ಗೆ ನಿಶಾ ಅವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ್ದು, ನಾನು ಸದ್ಯಕ್ಕೆ ಯಾವ ಪಕ್ಷದಲ್ಲಿಯೂ ಇಲ್ಲ, ನಾನು ಯಾವುದೇ ಪಕ್ಷವನ್ನ ಸೇರಿಲ್ಲ. ಕಾಂಗ್ರೆಸ್ ಸೇರಲು ಪ್ರಯತ್ನ ಮಾಡಿದ್ದೇನೆ. ಈ ಬಗ್ಗೆ ಮುಂದೆ ನಾನು ಉತ್ತರ ಕೊಡುತ್ತೇನೆ ಎಂದಿದ್ದರು. ಇನ್ನು ನಿಶಾ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದ ಡಿಕೆ ಶಿವಕುಮಾರ್, ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುವುದಾಗಿ ಭೇಟಿಯಾಗಿದ್ದರು. ಪಾಪ ಧೈರ್ಯವಂತ ಹೆಣ್ಣು ಮಗಳು. ಈಗ ಏನೋ ಧೈರ್ಯ ಮಾಡಿದ್ದಾಳೆ. ಆದರೆ, ಅಪ್ಪ, ಮಗಳನ್ನು ದೂರ ಮಾಡಬಾರದು ಎಂದು ನಾನು ಸುಮ್ಮನೆ ಇದ್ದೇನೆ ಎಂದು ಹೇಳಿದ್ದರು.