ಶಕತ ವೀರ ನಿತೀಶ್ ರೆಡ್ಡಿಗೆ ಆಂಧ್ರ ಕ್ರಿಕೆಟ್ ಸಂಸ್ಥೆಯು ಭರ್ಜರಿ ಬಹುಮಾನ ಘೋಷಿಸಿದೆ.
ಹೊಸಪೇಟೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಘಟನೆಗೆ ಫುಡ್ ಪಾಯ್ಸನ್ ಕಾರಣವಾ?
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡದ ವಿರುದ್ಧ ತಮ್ಮ ವೃತ್ತಿಜೀವನದ ನಾಲ್ಕನೇ ಟೆಸ್ಟ್ನಲ್ಲಿ ನಿತೀಶ್ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ನಿತೀಶ್ ಅವರ ಈ ಶತಕದ ಇನ್ನಿಂಗ್ಸ್ನಿಂದಾಗಿ ಟೀಂ ಇಂಡಿಯಾ ಫಾಲೋ ಆನ್ ಜೊತೆಗೆ ಸೋಲಿನ ಭೀತಿಯಿಂದಲೂ ಪಾರಾಗಿದೆ. ಹೀಗಾಗಿ ನಿತೀಶ್ ಅವರ ಶತಕಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಡುವೆ ಆಂಧ್ರ ಕ್ರಿಕೆಟ್ ಸಂಸ್ಥೆ ನಿತೀಶ್ಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ
ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ನ ಮೂರನೇ ದಿನದಾಟದಲ್ಲಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ನಲ್ಲಿ 6 ವಿಕೆಟ್ ಕಳೆದುಕೊಂಡ ಬಳಿಕ ಕ್ರೀಸ್ಗೆ ಬಂದ ನಿತೀಶ್, ವಾಷಿಂಗ್ಟನ್ ಸುಂದರ್ ಜೊತೆ ಅತ್ಯುತ್ತಮ ಜೊತೆಯಾಟ ನಡೆಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಇದಾದ ಬಳಿಕ ಈ ಐತಿಹಾಸಿಕ ನೆಲದಲ್ಲಿ ಶತಕ ಪೂರೈಸುವ ಮೂಲಕ ಬಾಲ್ಯದ ಕನಸನ್ನು ನನಸು ಮಾಡಿಕೊಂಡರು.
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬಂದಿರುವ ನಿತೀಶ್ ಅವರ ಈ ಸಾಧನೆ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಹೆಮ್ಮೆಯ ವಿಶೇಷಯವಾಗಿದ್ದು, ಈ ಯುವ ಆಲ್ರೌಂಡರ್ನ ಸ್ಮರಣೀಯ ಶತಕಕ್ಕೆ ಭರ್ಜರಿ ಬಹುಮಾನ ಘೋಷಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಮತ್ತು ಸಂಸದ ಕೆಸಿನೇನಿ ಶಿವನಾಥ್ ತಮ್ಮ ಎಕ್ಸ್ ಖಾತೆಯಲ್ಲಿ ನಿತೀಶ್ ಅವರನ್ನು ಅಭಿನಂದಿಸಿದ್ದು, ಈ ಸಾಧನೆ ಮತ್ತು ಕಠಿಣ ಪರಿಶ್ರಮಕ್ಕಾಗಿ ಅವರಿಗೆ ಸಂಘದಿಂದ 25 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದ್ದಾರೆ.