ಇದೇ ಮೊದಲ ಬಾರಿಗೆ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Nivedita Gowda) ದಂಪತಿ ಹಿರಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ನಿವೇದಿತಾ, ಈ ಹಿಂದೆಯೂ ಸಿನಿಮಾದಲ್ಲಿ ನಟಿಸುವಂತೆ ಆಫರ್ ಬಂದಿತ್ತು. ಆಗ ನಾನಿನ್ನೂ ಓದುತ್ತಿದ್ದೆ. ಹಾಗಾಗಿ ಒಪ್ಪಿಕೊಳ್ಳಲಿಲ್ಲ. ಈಗ ಒಪ್ಪಿಕೊಂಡಿದ್ದೇನೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ನನ್ನ ವೃತ್ತಿ ಬದುಕಿಗೆ ಒಳ್ಳೆಯ ವೇದಿಕೆಯನ್ನು ಒದಗಿಸಲಿದೆ ಎಂದಿದ್ದಾರೆ.
ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ (Puneeth Srinivas) ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರೇ ದಂಪತಿಗೆ ಕತೆ ಒಪ್ಪಿಸಿ ಚಿತ್ರ ಮಾಡಲು ಮುಂದಾಗಿದ್ದಾರೆ.
ಅವರು ತಮ್ಮ ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ಕಾನ್ಸೆಪ್ಟ್ ಮೂಲಕ ತಮ್ಮ ಹೊಸ ಜರ್ನಿಯನ್ನು ಆರಂಭಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ ಶ್ರೀ ಚೌಡೇಶ್ವರಿ ಸಿನಿ ಕ್ರಿಯೇಶನ್ಸ್ ಮೂಲಕ ಎಲ್.ಮೋಹನ್ ಕುಮಾರ್ ಅವರು ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದ್ದಾರೆ.
ಪುನೀತ್ ಶ್ರೀನಿವಾಸ್ ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ, ಶಿವಣ್ಣ, ಸುದೀಪ್ ರಂಥ ಸ್ಟಾರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ ನಂದಕಿಶೋರ್ ಅವರಬಳಿ ಅಧ್ಯಕ್ಷದಿಂದ ಟಗರು ಚಿತ್ರದವರೆಗೆ (ತೆಲುಗು ಸಿನಿಮಾ ಸೇರಿ) ಸುಮಾರು 12 ವರ್ಷಗಳ ಕಾಲ ಕೆಲಸ ಮಾಡಿ ನಿರ್ದೇಶನದ ಪಾಠ ಕಲಿತು ಇದೀಗ ಮೊದಲಬಾರಿಗೆ ನಿರ್ದೇಶನಕ್ಕಿಳಿಯುತ್ತಿದ್ದಾರೆ.