ಬೆಂಗಳೂರು: ಕರ್ನಾಟಕ ಬಂದ್ ವಿಚಾರವಾಗಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗ ರಾಜ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿಸೆಂಬರ್ 31 ರಂದು ಬಂದ್ ಗೆ ಕರೆ ನೀಡಲಾಗಿದ್ದು,
ಆದರೆ ಸುಮಾರು 30 ಸಂಘಟನೆಗಳು ಬಂದ್ ನಿಂದ ಹಿಂದೆ ಸರಿದಿವೆ. ಹೀಗಾಗಿ ಯಾರೇ ವಿರೋಧ ಮಾಡಿದರು ನಮ್ಮ ಹೋರಾಟ ನಿಲ್ಲುವುದಿಲ್ಲ. ರಾಜ್ಯದಲ್ಲಿ ಎಂಇಎಸ್ ನಿಷೇಧ ಆಗಲೇಬೇಕು ಹೀಗಾಗಿ ಬಂದ್ ನಡೆಸಿ ಯಶಸ್ವಿಗೊಳಿಸುತ್ತೇವೆ ಎಂದು ವಾಟಾಳ್ ನಾಗರಾಜ್ ಮಾಹಿತಿ ನೀಡಿದ್ದಾರೆ
