ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗಿ ಮೂಲಸೌಕರ್ಯ ಇಲ್ಲದೆ ನಷ್ಟದಲ್ಲಿರುವ ರಾಜ್ಯ ಹೊಸ ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ.
ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಸಿಎಂ ಉತ್ತರಿಸಿದರು.
ಡಿಸಿಎಂ ಡಿಕೆಶಿ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.