ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lokabha Election) ಬಿಜೆಪಿಗೆ 400 ಸೀಟುಗಳು ಸಿಗೋದು ಖಚಿತ. ಮತ್ತೆ ಮೋದಿಯವರು ಪ್ರಧಾನಿ ಆಗುವುದು ಖಚಿತ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ (BJP) ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತಾಡಿದ ಭೂಪೇಂದ್ರ ಯಾದವ್,
ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇಂದ್ರದಿಂದ ಅನೇಕ ಅನುದಾನಗಳು, ಜಿಎಸ್ಟಿ ಬಾಕಿ ಬಂದರೂ ಅಭಿವೃದ್ಧಿ ಶೂನ್ಯ. ಗ್ಯಾರಂಟಿ ಹೆಸರಿನಲ್ಲಿ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಜನರಿಗೆ ವಂಚಿಸುತ್ತಿದೆ ಎಂದು ಆರೋಪಿಸಿದರು.
Govt Scheme: ಬ್ಯುಸಿನೆಸ್ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಲೋನ್.! ಸುಲಭವಾಗಿ ಪಡೆಯಿರಿ 10 ಲಕ್ಷ ರೂ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ 28 ಕ್ಷೇತದಲ್ಲೂ ಜಯಿಸಲಿದೆ. ಬಳಿಕ ರಾಜ್ಯದಲ್ಲಿ ಕಮಲ ಅರಳುವುದು ಗ್ಯಾರಂಟಿ. ಪಶ್ಚಿಮ ಬಂಗಾಳ ಹಾಗೂ ಬಿಹಾರದ ಬೆಳವಣಿಗೆಯಿಂದ ಕಾಂಗ್ರೆಸ್ ಮತ್ತಷ್ಟು ಕುಗ್ಗಿದೆ ಎಂದು ಭೂಪೇಂದ್ರ ಯಾದವ್ ಹೇಳಿದರು.