ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮ ಜಿಲ್ಲೆಯ ಒಂದಷ್ಟು ಸಮಸ್ಯೆ ಇದೆ, ಬಗೆಹರಿಸಿಕೊಳ್ಳುತ್ತೇವೆ. ರಾಜಕೀಯವಾಗಿ ಎಲ್ಲಾ ಜಿಲ್ಲೆಗಳಲ್ಲೂ ಈ ಸಮಸ್ಯೆ ಇದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಬೆಳಗಾವಿಯಲ್ಲಿ ಸಮಸ್ಯೆ ಇತ್ತು. ಈಗಲೂ ಸಮಸ್ಯೆ ಇದ್ದೇ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಹೇಳಿದರು.
ರಾಜ್ಯ ಬಿಜೆಪಿ ನಾಯಕರಿಂದ ಬರ ಅಧ್ಯಯನ ಪ್ರವಾಸ ವಿಚಾರವಾಗಿ ಮಾತನಾಡಿ ಕೇಂದ್ರವೇ ಅಧ್ಯಯನ ಮಾಡಿದೆ, ಇವರೇನು ಅಧ್ಯಯನ ಮಾಡುತ್ತಾರೆ? ನಾವು ಕೂಡ ಬರ ಅಧ್ಯಯನ ಮಾಡಿದ್ದೀವಲ್ಲ. ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ. ಕೇಂದ್ರ ತಂಡ ಅಧ್ಯಯನ ಮಾಡಿ ಹೋಗಿದೆ,
ಆದರೆ ವರದಿ ನೀಡಿಲ್ಲ. ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಅನುದಾನ ಕೊಡಿಸಲಿ. ಬರ ಅಧ್ಯಯನ ಮಾಡಬಾರದು ಅಂತಾ ನಾವು ಹೇಳಲು ಹೋಗಲ್ಲ. ಕೇಂದ್ರ ಸರ್ಕಾರದ ಬಳಿ 17,900 ಕೋಟಿ ರೂ. ಪರಿಹಾರ ಕೇಳಿದ್ದೇವೆ. 33,700 ಕೋಟಿ ನಷ್ಟವಾಗಿದೆ, ಅದನ್ನ ಮೊದಲು ಕೊಡಿಸಲಿ ಎಂದರು.