ಹುಬ್ಬಳ್ಳಿ: ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ನಿರ್ಣಯ ಕೈಗೊಂಡ ಕಾರ್ಯಕಾರಿಣಿ ಸಮಿತಿ ಸದಸ್ಯರಿಗೆ ಧನ್ಯವಾದಗಳು. ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮುನ್ನಡೆಯಿರಿ ಎಂದು ಬೆನ್ನು ತಟ್ಟಿದ್ದಾರೆ. ಬಿಜೆಪಿ ವರಿಷ್ಠರು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಿಗೆ ಧನ್ಯವಾದಗಳನ್ನ ತಿಳಿಸುತ್ತೇನೆ. ಪಕ್ಷ ಬಲಿಷ್ಠವಾಗಬೇಕೆಂಬ ಅವರ ನಿರೀಕ್ಷೆಯನ್ನು ಹುಸಿಗೊಳಿಸಲ್ಲ. ಮುಂಬರುವ ಚುನಾವಣೆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋಗಬೇಕೆಂಬ ಅವರ ನಿರೀಕ್ಷೆಯನ್ನು ಸಾಕಾರ ಮಾಡ್ತೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕಾರ್ಯಕಾರಿಣಿ ಯಶಸ್ವಿಯಾಗಿ ನಡೆಯುತ್ತಿದೆ ಅಂತ ತಿಳಿಸಿದ್ದಾರೆ. ಶಾಸಕ ಅರವಿಂದ ಬೆಲ್ಲದ ಮಹಾನಗರ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರೋ ವಿಚಾರ ನನಗೆ ಗೊತ್ತಿಲ್ಲ.

ಅವರು ಸಿಕ್ಕ ಕೂಡಲೇ ಅದರ ಬಗ್ಗೆ ವಿಚಾರಿಸುತ್ತೇನೆ. ವರಿಷ್ಠರಿಗೆ ಇರೋ ಸ್ಪಷ್ಟತೆಯನ್ನು ಅರುಣ್ ಸಿಂಗ್ ಅವರು ಕಾರ್ಯಕಾರಿಣಿಯಲ್ಲಿ ವ್ಯಕ್ತಪಡಿಸಿದ್ದಾರೆ. ಮೊದಲಿನಿಂದಲೂ ನನ್ನ ಮೇಲೆ ವರಿಷ್ಠರಿಗೆ ವಿಶ್ವಾಸವಿದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ದೆಹಲಿ ಪ್ರವಾಸ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಯಾರು ಎಲ್ಲಿಗೆ ಬೇಕಾದ್ರೂ ಹೋಗೋ ಸ್ವಾತಂತ್ರ್ಯವಿದೆ ಎಂದಷ್ಟೇ ಹೇಳಿದ್ದಾರೆ.