ಬೆಂಗಳೂರು:- ಕೇಂದ್ರ ಸರ್ಕಾರ ಕರ್ನಾಟಕದ ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಹಣ ಬಿಡುಗಡೆ ವಿಳಂಬದ ಆರೋಪಕ್ಕೆ ಪ್ರತಿಕ್ರಿಯಿಸಿ, ”ನರೇಂದ್ರ ಮೋದಿ ಅವರು 10 ವರ್ಷಕ್ಕೂ ಹೆಚ್ಚು ಕಾಲ ಒಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದರಿಂದ, ಎಲ್ಲಾ ರಾಜ್ಯಗಳಿಗೂ ಸಕಾಲದಲ್ಲಿ ಹಣ ಬಿಡುಗಡೆ ನೀಡಬೇಕೆಂಬುದು ಅವರಿಗೆ ಚೆನ್ನಾಗಿ ತಿಳಿದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸುಮ್ಮನೆ ಆರೋಪಗಳನ್ನು ಮಾಡಬಾರದು. ನನಗೆ ಮನವಿ ಪತ್ರ ತಲುಪುವ ಮೊದಲು ಸಚಿವರು ಅಥವಾ ಮುಖ್ಯಮಂತ್ರಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಬಹುದು. ನಾನು ಎರಡು ದಿನಗಳ ಹಿಂದೆ, ಕೇರಳದಲ್ಲಿದ್ದಾಗ ಈ ವಿಚಾರ ಗಮನಕ್ಕೆ ಬಂದಿಂದೆ” ಎಂದರು.
ನಮ್ಮ ಕಡೆಯಿಂದ ಕರ್ನಾಟಕಕ್ಕೆ ಏನೂ ಬಾಕಿ ಇಲ್ಲ. ನಾನು ರಾಜ್ಯದ ಸಂಸದೆ, ನನಗೂ ಜವಾಬ್ದಾರಿ ಇದೆ. ಯಾವುದನ್ನೂ ಬಾಕಿ ಉಳಿಸಿಕೊಂಡಿಲ್ಲ. ಕಾಂಗ್ರೆಸ್ ಆರೋಪಗಳು ಸತ್ಯಕ್ಕೆ ದೂರವಾಗಿವೆ” ಎಂದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 23 ಇಲಾಖೆಗಳಲ್ಲಿ 61 ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದೆ. ಕರ್ನಾಟಕದ ತೆರಿಗೆ ಪಾಲು ಕಡಿತಗೊಳಿಸುವ ಮೂಲಕ ನಮ್ಮ ರಾಜ್ಯಕ್ಕೆ ಹೊರೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ತಿಂಗಳು ಆರೋಪಿಸಿದ್ದರು.