ವಾಷಿಂಗ್ಟನ್: ಭಾರತೀಯರು ಮತ್ತು ಭಾರತೀಯ ಅಮೆರಿಕನ್ ವಿದ್ಯಾರ್ಥಿಗಳ ಮೇಲಿನ ದಾಳಿಗಳನ್ನು ತಡೆಯಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಆಡಳಿತವು ಶ್ರಮಿಸುತ್ತಿದೆ ಎಂದು ಶ್ವೇತಭವನ ತಿಳಿಸಿದೆ.
ದೇಶದ ವಿವಿಧ ಭಾಗಗಳಲ್ಲಿ ಭಾರತೀಯರು ಮತ್ತು ಭಾರತೀಯ ಅಮೆರಿಕನ್ ವಿದ್ಯಾರ್ಥಿಗಳ ಮೇಲೆ ನಡೆದಿರುವ ದಾಳಿಗಳ ನಡುವೆಯೇ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರದ ಸಂವಹನಗಳ ಸಂಯೋಜಕ ಜಾನ್ ಕಿರ್ಬಿ ಈ ಹೇಳಿಕೆ ನೀಡಿದ್ದಾರೆ.
‘ಹಿಂಸಾಚಾರಿಗಳಿಗೆ ಯಾವುದೇ ಕ್ಷಮೆ ರೀತಿಯ ಇಲ್ಲ. ಅದರಲ್ಲೂ ಜನಾಂಗ, ಲಿಂಗ, ಧರ್ಮ ಅಥವಾ ಯಾವುದೇ ಇತರ ಅಂಶಗಳ ಆಧಾರದ ಮೇಲೆ ನಡೆಯುವ ಹಿಂಸಾಚಾರಗಳನ್ನು ನಾವು ಸಹಿಸಲ್ಲ. ಇಂತಹ ಘಟನೆಗಳು ಅಮೆರಿಕದಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.
‘ಅಧ್ಯಕ್ಷ ಜೋ ಬೈಡನ್ ಮತ್ತು ನಮ್ಮ ಆಡಳಿತವು ಆ ರೀತಿಯ ದಾಳಿಗಳನ್ನು ತಡೆಯಲು ಶ್ರಮಿಸುತ್ತಿದೆ. ಈ ಸಂಬಂಧ ರಾಜ್ಯ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದ್ದಾರೆ.