ಕೋಲಾರ: ಕೇಂದ್ರ ಏನೇ ಅಡೆತಡೆ ಮಾಡಿದರೂ ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಕಂದಾಯ ಖಾತೆ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಕೇಂದ್ರ ಸರ್ಕಾರ ನಮ್ಮ ದಾರಿಗೆ ಬೆಟ್ಟವನ್ನೇ ಅಡ್ಡ ತಂದು ಕೂರಿಸಿದರೆ ಬೆಟ್ಟವನ್ನು ಹತ್ತಿ ಜನರಿಗೆ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ. ಜನರಿಗೆ ಕೊಟ್ಟ ಮಾತಿನಂತೆ ಅಕ್ಕಿಯನ್ನು ಕೊಟ್ಟೇ ತೀರುತ್ತೇವೆ ಎಂದರು.
ತೆಲಂಗಾಣ ಸರ್ಕಾರ ಕರ್ನಾಟಕಕ್ಕೆ ಭತ್ತ ಕೊಡುವುದಾಗಿ ಹೇಳಿದ್ದಾರೆ. ಛತ್ತೀಸ್ಗಢ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡುವುದಾಗಿ ಹೇಳಿದೆ. 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಪಂಜಾಬ್ನವರು ನವೆಂಬರ್ನಿಂದ ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದಾರೆ

