ಬೆಂಗಳೂರು:- ಯಾರು ಎಷ್ಟೇ ಬೊಬ್ಬೆ ಹೊಡೆದರೂ ನಾನೇ ಸಿಎಂ, ನನ್ನ ಕುರ್ಚಿ ಖಾಲಿ ಇಲ್ಲ ಎಂದು ಸಿದ್ದರಾಮಯ್ಯ ಖಡಕ್ ಹೇಳಿಕೆ ಕೊಟ್ಟಿದ್ದಾರೆ.
ಕರ್ನಾಟಕದಲ್ಲಿ ಸಧ್ಯ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಕುರ್ಚಿ ಖಾಲಿ ಇಲ್ಲ. ನಾನೇ ಮುಂದುವರಿಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಯಾರೂ ಹೇಳಿಕೆ ಕೊಟ್ಟಿಲ್ಲ. ಸಿಎಂ ಹುದ್ದೆ ಖಾಲಿಯಾದಾಗ ನಾವು ಬರುತ್ತೇವೆ ಎಂದಿದ್ದಾರೆ. ಯಾವುದೇ ಡೌಟು ಇಲ್ಲ, ನಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ.
ಇನ್ನೂ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯ ಕೂಗು ಜೋರಾಗಿದೆ. ಪ್ರತಿಯೊಬ್ಬರು ಅವಕಾಶ ಸಿಕ್ಕರೇ ನಾನು ಸಿಎಂ ಆಗುತ್ತೆ ಎನ್ನುತ್ತಿದ್ದಾರೆ.