ಮೈಸೂರು:– ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಲ್ಲ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಡೆಲ್ಲಿಯ ಬೌಲಿಂಗ್ ದಾಳಿಗೆ ತತ್ತರಿಸಿದ ಗುಜರಾತ್!, ನೂತನ ದಾಖಲೆ ಬರೆದ ಪಂತ್ ಪಡೆ!
ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬದಲಾವಣೆ ನೋಡಿದ ಮೇಲೆ ಡಿ.ಕೆ.ಶಿವಕುಮಾರ್ ಭಾಷೆಯಲ್ಲಿ ಬದಲಾವಣೆ ಆಗ್ತಿದೆ. ಕಾಂಗ್ರೆಸ್ಗೆ ಈಗ ಕುಮಾರಸ್ವಾಮಿಯೇ ಟಾರ್ಗೆಟ್. ಮೈಸೂರು ಜಿಲ್ಲೆಯಲ್ಲಿ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಅಂತಾ ಡಿಕೆಶಿ ಹೇಳಿದ್ದಾರೆ. ಒಕ್ಕಲಿಗರಿಗೆ ಸಿದ್ದರಾಮಯ್ಯರಿಂದ ರಕ್ಷಣೆ ಸಿಕ್ಕಿಲ್ಲ. ಅವರಿಂದ ಅನ್ಯಾಯವಾಗಿದೆ ಅಂತಾ ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಒಕ್ಕಲಿಗರಿಗೆ ಅವರ ಪಕ್ಷದ ಸಿಎಂ ಯಿಂದಲೆ ಅನ್ಯಾಯವಾಗಿದೆ ಅನ್ನೋದು ಶಿವಕುಮಾರ್ ಮಾತಿನ ಅರ್ಥ. ಸಿಎಂ ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಿಲ್ಲ. ಸಿಎಂ ಆಗಲು ತಮಗೆ ಅಡ್ಡಿಯಾಗುತ್ತಾರೆ ಅಂತಾ ಪರಮೇಶ್ವರ್ ಸೋಲಿಸಿದ್ದು ಯಾರು ಎಂದು ಪ್ರಶ್ನಿಸಿದರು.
ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದೆ ಇದ್ದರೆ ಬಿಜೆಪಿಗೆ ಹೋಗ್ತಿನಿ ಅಂತಾ ಕಾಂಗ್ರೆಸ್ ಹೈಕಮಾಂಡ್ಗೆ ಸಿದ್ದರಾಮಯ್ಯ ಬೆದರಿಸಿದ್ದರು. ಈ ಚುನಾವಣೆಯಲ್ಲಿ 85 ರಿಂದ 90 ರಷ್ಟು ಒಕ್ಕಲಿಗರು ಮೈತ್ರಿ ಪರ ಇದ್ದಾರೆ ಎಂದು ಹೇಳಿದರು.
ಇನ್ನೂ ರಾಹುಲ್ ಗಾಂಧಿಯ ಮುಕ್ಕಾಲು ಗಂಟೆ ಭಾಷಣದಿಂದ ಯಾವ ಪರಿವರ್ತನೆಯೂ ಆಗಲ್ಲ. ನನ್ನ ಸೋಲು ಗೆಲುವು ಶಿವಕುಮಾರ್ ಕೈಲಿ ಇದ್ಯಾ? ಹಣದ ದುರಹಂಕಾರ, ದರ್ಪದಿಂದ ನಾನು ಸೋಲ್ತಿನಿ ಅಂತಾ ಹೇಳ್ತಿದ್ದಾರೆ. ಹಣದಿಂದ ಮಂಡ್ಯದ ಜನರನ್ನು ಶಿವಕುಮಾರ್ ಕೊಡು ಕೊಳ್ಳಲು ಆಗಲ್ಲ ಎಂದು ತಿರುಗೇಟು ನೀಡಿದರು.