ಹಾಸನ: ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಈ ದೇಶದ ಪ್ರಧಾನಿಯಾಗೋದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯ ಬಜೆಟ್ ಅಧಿವೇಶನಕ್ಕೂ (Budget Session) ಮುನ್ನ ಮಾಜಿ ಸಿಎಂ ಹೆಚ್ಡಿಕೆ ತವರು ಜಿಲ್ಲೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹಾಸನ ತಾಲೂಕಿನ ಚನ್ನಂಗಿಹಳ್ಳಿ ಗ್ರಾಮದ ಕೆರೆಕೋಡಿಯಮ್ಮ ಹಾಗೂ ಈಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
ಸುಲಿದ ಬೆಳ್ಳುಳ್ಳಿಯನ್ನು ಫ್ರಿಡ್ಜ್ ನಲ್ಲಿ ಇಡುತ್ತಿದ್ದೀರಾ: ಈಗಲೇ ನಿಲ್ಲಿಸಿ ಅಪಾಯ ಕಟ್ಟಿಟ್ಟಬುತ್ತಿ!
ನಿಖಿಲ್ನ ರಾಜಕೀಯವಾಗಿ ಮುಗಿಸಲು ಪ್ಲ್ಯಾನ್:
ಮಂಡ್ಯ ಕ್ಷೇತ್ರದ್ದು ಪ್ರತಿ ದಿನ ಒಂದು ಧಾರಾವಾಹಿ ಇರಲೇಬೇಕು. ನಿಖಿಲ್ ಕುಮಾರಸ್ವಾಮಿ ಅವರನ್ನ ರಾಜಕೀಯವಾಗಿ ಮುಗಿಸಲೇಬೇಕು ಎಂದು ಯಾವ ರೀತಿ ರಾಜಕೀಯ ಮಾಡಿದ್ರು. ಪಾಪ ಅವನು ಅಮಾಯಕ, ಒಂದು ತಿಂಗಳಿನಿಂದ ಧಾರಾವಾಹಿ ನಡೆಯುತ್ತಿದೆ. ಈ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಸಣ್ಣಪುಟ್ಟ ಸಮಸ್ಯೆಗಳಿವೆ, ಸರಿಪಡಿಸಿಕೊಳ್ಳುತ್ತೇವೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಬೀಗಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)