ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ಬಿಜೆಪಿ ಜಯ ಸಾಧಿಸಿದೆ. ಉತ್ತರ ಭಾರತದ ಜನತೆ ನರೇಂದ್ರ ಮೋದಿ ಕೈಬಲಪಡಿಸಿದ್ದಾರೆ ಎಂದು ನವದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದರು. ನರೇಂದ್ರ ಮೋದಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ.
2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗ್ತಾರೆ. ನರೇಂದ್ರ ಮೋದಿಯವರ ನಾಯಕತ್ವಕ್ಕೆ ಜನಬೆಂಬಲ ಸಿಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಬಿಜೆಪಿಯನ್ನು ಬಲಪಡಿಸಬೇಕಿದೆ ಎಂದರು. ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 48 ಕ್ಷೇತ್ರಗಳಲ್ಲಿ ಬಿಜೆಪಿ, 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದಿದೆ.