ಮೈಸೂರು:- ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳಿಂದ ರಾಜೀನಾಮೆ ಒತ್ತಡ ವಿಚಾರವಾಗಿ ಮಾತನಾಡಿ, ಸ್ವಲ್ಪದಿನ ತೊಂದ್ರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು ಮಾಡುವುದಕ್ಕೆ ಆಗಲ್ಲ ಎಂದು ಹೇಳಿದ್ದಾರೆ.
ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರಂದು ನನಗೆ ಎಷ್ಟೋ ಜನ ಹೇಳುತ್ತಿದ್ದಾರೆ. ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಸಿಎಂ ಮಾತು ಕೇಳಿ ನೆರದಿದ್ದ ಜನರು ಹೌದು ಹುಲಿಯಾ ಎಂದಿದ್ದಾರೆ.
ಈ ಬಾರಿ ಶ್ರೀವತ್ಸ ಗೆದಿದ್ದಾನೆ ಸೋಮಶೇಖರ್ ಸೋತಿದ್ದಾನೆ. ನಾನು, ಮಹದೇವಪ್ಪ, ಶ್ರೀನಿವಾಸ ಪ್ರಸಾದ್ ಎಲ್ಲರೂ ಅಂಬೇಡ್ಕರ್ ವಾದಿಗಳು. ಅಂಬೇಡ್ಕರ್ ಸಂವಿಧಾನವನ್ನು ದಲಿತರಿಗೆ ಮಾತ್ರ ಮಾಡಲಿಲ್ಲ. ಅವಕಾಶ ವಂಚಿತರೆಲ್ಲರಿಗೂ ಮಾಡಿದ್ದಾರೆ.
ಅಂಬೇಡ್ಕರ್ ಸಂವಿಧಾನದಿಂದ ನಾನು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ಪೌರಕಾರ್ಮಿಕರು ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಯಾಗಲು ಅವಕಾಶ ಕೊಟ್ಟಿರುವುದು ಸಂವಿಧಾನ. ದಲಿತರ ಆರ್ಥಿಕ ಸಾಮಾಜಿಕ ಬದಲಾವಣೆಯಾಗಬೇಕಾದರೇ ಜನಸಂಖ್ಯೆಗೆ ಅನುಗುಣವಾಗಿ ಖರ್ಚು ಮಾಡಬೇಕು ಎಂದಿದ್ದಾರೆ. ಗ್ಯಾರಂಟಿ ಯೋಜನೆ ವಿಚಾರವಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಯಾವುದಕ್ಕೆ ಕಾರಣಕ್ಕೂ ನಿಲ್ಲಿಸಲ್ಲ ಎಂದು ಹೇಳಿದ್ದಾರೆ.