ಮಂಡ್ಯ: ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಯಾರ ತಕರಾರೂ ಇಲ್ಲ ಎಂದು ಮಂಡ್ಯದಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಹೇಳಿದರು. JDS ಎನ್ಡಿಎ ತೆಕ್ಕೆಗೆ ಬರಬೇಕು ಎಂಬುದು ವರಿಷ್ಠರ ತೀರ್ಮಾನ. ಈ ತೀರ್ಮಾನದ ಬಗ್ಗೆ ರಾಜ್ಯದಲ್ಲಿ ಉತ್ಸಾಹ ಇದೆ. ಮೈತ್ರಿಯಿಂದ ತಳಮಟ್ಟದ ಕಾರ್ಯಕರ್ತರಿಗೂ ಉತ್ಸಾಹ ಬಂದಿದೆ.
Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, JDS ಹೆಚ್ಚು ಸ್ಥಾನ ಗೆಲ್ಲುತ್ತದೆ. ನಮ್ಮ ಗುರಿ ಮತ್ತೊಮ್ಮೆ ಮೋದಿಯನ್ನು ಪ್ರಧಾನಿ ಮಾಡುವುದು. ಬಿಜೆಪಿ ಮತ್ತು ಜೆಡಿಎಸ್ ಒಟ್ಟಿಗೆ ಕೆಲಸ ಮಾಡುತ್ತೇವೆ. ಮಂಡ್ಯ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷ ಕೈಬಿಡುವ ಪ್ರಶ್ನೆ ಇಲ್ಲ. ಮಂಡ್ಯದಲ್ಲಿ ಪಕ್ಷ ಸಂಘಟನೆಗೆ ನಾಯಕರಿಗೆ ಹೆಚ್ಚು ಶಕ್ತಿ ಕೊಡುತ್ತೇವೆ ಎಂದರು.