ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಪಂಚಮಸಾಲಿ ಸಮುದಾಯಕ್ಕೆ ಸೇರಿದವರಲ್ಲ. ಪಂಚಮಸಾಲಿಗರ ಮತ ಸೆಳೆಯುವುದಕ್ಕಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸುಳ್ಳು ಹೇಳುತ್ತಿದ್ದಾರೆ. ಮೃಣಾಲ್ ತಂದೆ ರವೀಂದ್ರ ಹೆಬ್ಬಾಳಕರ್ ಅವರು ಲಿಂಗಾಯತ ವೀರಶೈವ ಬಣಜಿಗ ಸಮುದಾಯದವರು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ತಿರುಗೇಟು ನೀಡಿದ್ದಾರೆ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಮದುವೆಗೆ ಮುನ್ನ ಲಕ್ಷ್ಮೀ ಹಟ್ಟಿಹೊಳಿಯಾಗಿದ್ದ ಅವರು ಹಿಂದೂ ಪರಂಪರೆಯಂತೆ ಈಗ ಅವರು ಮತ್ತು ಅವರ ಮಕ್ಕಳು ರವೀಂದ್ರ ಹೆಬ್ಬಾಳಕರ್ ಸಮುದಾಯಕ್ಕೆ ಸೇರುತ್ತಾರೆ,” ಎಂದರು. ”ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಕಿತ್ತೂರು ರಾಣಿ ಚನ್ನಮ್ಮ ಅವರನ್ನು ಮತ್ತೊಬ್ಬರಿಗೆ ಹೋಲಿಕೆ ಮಾಡುವ ಅಧಿಕಾರ ಯಾರಿಗೂ ಇಲ್ಲ.
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮನ್ನು ರಾಣಿ ಚನ್ನಮ್ಮ ಅವರೊಂದಿಗೆ ಹೋಲಿಸಿಕೊಳ್ಳುವುದು ಸೂಕ್ತವಲ್ಲ. ನಮ್ಮ ಮೀಸಲಾತಿ ಹೋರಾಟ ಕಳೆದ 25 ವರ್ಷಗಳಿಂದ ನಡೆಯುತ್ತಿದೆ. ಆದರೆ, ಲಕ್ಷ್ಮೀ ಹೆಬ್ಬಾಳಕರ್ ಮೂರ್ನಾಲ್ಕು ವರ್ಷಗಳಿಂದ ಹೋರಾಟದಲ್ಲಿ ಭಾಗವಹಿಸುತ್ತಿದ್ದಾರೆ. ಬಿಜೆಪಿ ಸರಕಾರ ಅನ್ಯ ಸಮುದಾಯಗಳಿಗೆ ಅನ್ಯಾಯ ಮಾಡದೇ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒದಗಿಸಲು ‘2ಡಿ’ ಮೀಸಲಾತಿ ಘೋಷಿಸಿತ್ತು,” ಎಂದು ಅವರು ತಿಳಿಸಿದರು.