ನವದೆಹಲಿ : ಭಾರತದ ಭದ್ರ ಬುನಾದಿ ದುರ್ಬಲಗೊಳಿಸಲಾಗುತ್ತಿದೆ. ಭಾರತದ ಇತಿಹಾಸವನ್ನು ತಿರುಚಲಾಗುತ್ತಿದೆ. ದೇಶದ ಸಾಮಾನ್ಯ ಪ್ರಜೆಗೆ ಅಭದ್ರತೆ ಮತ್ತು ಭಯ ಕಾಡುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಬದಿಗೊತ್ತಿ ಸರ್ವಾಧಿಕಾರ ನಡೆಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.136ನೇ ಕಾಂಗ್ರೆಸ್ ಸಂಸ್ಥಾಪನ ದಿನದ ಹಿನ್ನಲೆ ಕಾರ್ಯಕರ್ತರಿಗಾಗಿ ಸೋನಿಯಾಗಾಂಧಿ ವೀಡಿಯೋ ಸಂದೇಶ ಬಿಡುಗಡೆ ಮಾಡಿದ್ದು,
ಈ ವೀಡಿಯೋ ಸಂದೇಶದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ದೇಶದ ಪರಂಪರೆಯನ್ನು ನಾಶ ಮಾಡಲು ಯಾರಿಗೂ ಅವಕಾಶ ನೀಡು ವುದಿಲ್ಲ. ಜನಸಾಮಾನ್ಯರಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ, ದೇಶ ವಿರೋಧಿ, ಸಮಾಜ ವಿರೋಧಿ ಷಡ್ಯಂತ್ರಗಳ ವಿರುದ್ಧ ಸಾಧ್ಯ ವಿರುವ ಎಲ್ಲ ಹೋರಾಟವನ್ನು ಮಾಡುತ್ತೇನೆ. ಪ್ರತಿಯೊಬ್ಬ ಕಾಂಗ್ರೆಸಿಗರು ಇದೇ ನಿರ್ಣಯ ಕೈಗೊಂಡು ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಬೇಕಾಗಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ
