ನವದೆಹಲಿ: ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸ್ಪಷ್ಟಪಡಿಸಿದ ಅವರು, ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.
ಇಂಡಿಯಾ ವಿರೋಧ ಪಕ್ಷದ ಭಾಗವಾಗಿದ್ದರೂ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಅರವಿಂದ್ ಕೇಜ್ರಿವಾಲ್ ತಳ್ಳಿಹಾಕಿದ್ದು ಇದೇ ಮೊದಲಲ್ಲ. ಈ ತಿಂಗಳ ಆರಂಭದಲ್ಲಿ, ಕೇಜ್ರಿವಾಲ್ ಪಕ್ಷವು ಸತತ ಮೂರನೇ ಅವಧಿಗೆ ಗಮಹರಿಸುತ್ತಿರುವುದರಿಂದ ದೆಹಲಿ ವಿಧಾನಸಭಾ ಚುನಾವಣೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಸ್ಸಂದಿಗ್ಧವಾಗಿ ಹೇಳಿದರು. 2015 ರಿಂದ ದೆಹಲಿಯಲ್ಲಿ ಎಎಪಿ ಅಧಿಕಾರದಲ್ಲಿದೆ. ಈ ಚುನಾವಣೆ ಮೂಲಕ ದೆಹಲಿಯಲ್ಲಿ ಬಿಜೆಪಿ ತನ್ನ ಪ್ರಭಾವವನ್ನು ವಿಸ್ತರಿಸುವ ವಿಫಲ ಪ್ರಯತ್ನ ಮಾಡುತ್ತಿದೆ.
Pension Scheme: ನೀವು ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಪಿಂಚಣಿ ಸಿಗುತ್ತೆ!
ಆದರೆ ಇಂಡಿಯಾ ಒಕ್ಕೂಟ ಒಟ್ಟಾಗಿ ಚುನಾವಣೆಗೆ ಹೋಗುವ ಲೆಕ್ಕಾಚಾರದಲ್ಲಿದೆ. ಲೋಕಸಭೆ ಚುನಾವಣೆಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಿದ್ದವು ಆದರೆ ಬಿಜೆಪಿ ಎಲ್ಲಾ ಸ್ಥಾನಗಳನ್ನು ಗೆದ್ದಿತ್ತು. ಬಳಿಕ ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೆಂದರ್ ಯಾದವ್ ಅವರು ಎಎಪಿ ಜೊತೆಗಿನ ಮೈತ್ರಿಯನ್ನು “ತಪ್ಪು” ಎಂದು ಕರೆದರು ಮತ್ತು ನಗರದ ಎಲ್ಲಾ 70 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪ್ರತಿಪಾದಿಸಿದರು.