ಬೆಂಗಳೂರು:- ಬಿಜೆಪಿಗೆ ಮರಳಿ ಹೋಗುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಜನಾರ್ದನ್ ರೆಡ್ಡಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ ಎಂದರು.
ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ. ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಯೋಚನೆಯೇ ಮಾಡಿಲ್ಲ. ಕೆಆರ್ಪಿಪಿ ಪಕ್ಷದ ಸ್ಥಾಪಿಸಿದಾಗ ಯಾರೆಲ್ಲಾ ಎಷ್ಟೇ ಪ್ರಯತ್ನಿಸಿದರೂ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ನಾನು ಮುಂದೆ ಹೋಗುತ್ತೇನೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ನನ್ನ ಸಹಾಯ ಕೇಳುವ ಪರಿಸ್ಥಿತಿಯಲ್ಲಿ ಬಿಜೆಪಿ ಇಲ್ಲ. ಯಡಿಯೂರಪ್ಪ ಅವರನ್ನು ತಂದೆಯ ಸ್ಥಾನದಲ್ಲಿ ಗೌರವಿಸಿದರೆ, ಶ್ರೀರಾಮುಲು ಅವರನ್ನು ಮಗು ರೂಪದಲ್ಲಿ ನೋಡುತ್ತೇನೆ. ಅವರು ಆಯಾ ಪಕ್ಷದಲ್ಲಿ ಚೆನ್ನಾಗಿರಲಿ ಎಂದು ಬಯಸುವೆ ಹೊರತು ಅವರನ್ನು ಆಹ್ವಾನ ಮಾಡಲ್ಲ ಎಂದು ಹೇಳಿದ್ದಾರೆ.