ಬೆಂಗಳೂರು:- ಇಡಿ ವಿರುದ್ಧ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ವೀರಪ್ಪ ಮೊಯ್ಲಿ, ನಲಪಾಡ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯದ ವಿರುದ್ಧ 2022 ರ ಆಗಸ್ಟ್ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ವೀರಪ್ಪ ಮೊಯ್ಲಿ, ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.