ಬಹುತಾರಾಗಣದ ‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಫೇಮಸ್ ಆದ ನಾಗ್ ಅಶ್ವಿನ್ ಅವರು ಸದ್ಯ ಈ ಚಿತ್ರದ ಸೀಕ್ವೆಲ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದ ನಿರ್ದೇಶಕ ಈಗ ಆಲಿಯಾ ಭಟ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ವರದಿ ಆಗಿತ್ತು. ಆದರೆ ಈ ಸುದ್ದಿಯನ್ನು ನಾಗ್ ಅಶ್ವಿನ್ ನಿರಾಕರಿಸಿದ್ದಾರೆ.
ಟಾಲಿವುಡ್ ನಲ್ಲಿ ಬೇಡಿಕೆ ಕಾಯ್ದುಕೊಂಡಿರುವ ನಾಗ್ ಅಶ್ವಿನ್ ಆಲಿಯಾ ಭಟ್ ಜೊತೆ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ನಾಗ್ ಅಶ್ವಿನ್ ಅವರು ಸಿನಿಮಾಗಳನ್ನು ಮಾಡುತ್ತಿರುವುದು ತೆಲುಗಿನಲ್ಲಿ. ಆಲಿಯಾ ಭಟ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನು ಅಲ್ಲ. ಅವರು ಈಗಾಗಲೇ ‘ಆರ್ಆರ್ಆರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ನಾಗ್ ಅಶ್ವಿನ್ ಅವರು ಮಹಿಳಾ ಪ್ರಧಾನ ಪಾತ್ರ ಮಾಡಲು ಹೊರಟಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ಆಲಿಯಾ ಹೀರೋಯಿನ್ ಎಂದು ಹೇಳಲಾಗಿತ್ತು.
ಆಲಿಯಾ ಭಟ್ ಅವರು ಹಲವು ಮಹಿಳಾ ಪ್ರಧಾನ ಸಿನಿಮಾ ಮಾಡಿ ಗಮನ ಸೆಳೆದಿದ್ದಾರೆ. ‘ರಾಜಿ’ ಚಿತ್ರದಲ್ಲಿ ಅವರ ನಟನೆ ತೋರಿಸಿದ್ದಾರೆ. ‘ಜಿಗ್ರಾ’ ಸಿನಿಮಾದಲ್ಲೂ ಅವರು ಪವರ್ಫುಲ್ ಪಾತ್ರದಲ್ಲೇ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಆಲಿಯಾ ಭಟ್ ಅವರ ನಟನೆಗೆ ಮೆಚ್ಚುಗೆ ಸಿಕ್ಕಿದೆ. ಅವರು ಇದೇ ರೀತಿಯ ಪಾತ್ರ ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ.
ಆಲಿಯಾ ಭಟ್ ಅವರು ಇದಲ್ಲದೆ, ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಲವ್ ಆ್ಯಂಡ್ ವಾರ್’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿಯೂ ಆಲಿಯಾ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್ನಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಸದ್ಯಕ್ಕೆ ಆಲಿಯಾ ಜೊತೆ ಸಿನಿಮಾ ಮಾಡುತ್ತಿಲ್ಲ ಎಂದು ನಾಗ್ ಅಶ್ವಿನ್ ಹೇಳಿದ್ದಾರೆ.