ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಹಾಗೂ ಕಾಲಿವುಡ್ ನಟ ಸಿದ್ಧಾರ್ಥ್ ಸದ್ದಿಲ್ಲದೇ ಹಸೆಮಣೆ ಏರಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಸ್ಥಾನದಲ್ಲಿ ಸಿಂಪಲ್ ಆಗಿ ಈ ಜೋಡಿ ಮದುವೆಯಾಗಿದೆ ಎಂದು ಹೇಳಲಾಗಿತ್ತು. ಇದೀಗ ಮದುವೆಗೆ ಸುದ್ದಿಗೆ ನಟಿ ಸ್ಪಷ್ಟನೆ ನೀಡಿದ್ದಾರೆ.
ಅಮಿರ್ ಖಾನ್ ಪುತ್ರಿ ಇರಾ ಖಾನ್ ಮದುವೆಯಲ್ಲಿ ಕಾಣಿಸಿಕೊಂಡಿದ್ದ ಅದಿತಿ ಮತ್ತು ಸಿದ್ಧಾರ್ಥ ಅವರ ಫೋಟೋವನ್ನೇ ಮದುವೆ ಫೋಟೋ ಎಂದು ವೈರಲ್ ಮಾಡಲಾಗಿತ್ತು. ಶೂಟಿಂಗ್ ಎಂದು ಸುಳ್ಳು ಹೇಳಿ ಇಬ್ಬರೂ ಮದುವೆ ಆಗಿದ್ದಾರೆ ಎಂದು ಆರೋಪಿಸಲಾಗಿತ್ತು. ಎಲ್ಲದಕ್ಕೂ ಅದಿತಿ ಉತ್ತರ ನೀಡಿದ್ದಾರೆ.
ಸಿದ್ದಾರ್ಥ್ ಜೊತೆಗಿನ ಫೋಟೋ ಹಂಚಿಕೊಂಡ ನಟಿ ಎಂಗೇಜ್ಮೆಂಟ್ ಮಾಡಿಕೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಎಂಗೇಜ್ ಮೆಂಟ್ ನಲ್ಲಿ ತೊಡಿಸಿರುವ ಉಂಗುರವನ್ನು ಫೋಟೋದಲ್ಲಿ ಹೈಲೈಟ್ ಮಾಡಲಾಗಿದೆ.
ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು, ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ಸಿದ್ಧಾರ್ಥ್ ಜೊತೆಗಿನ ಖಾಸಗಿ ಫೋಟೋ ಹಂಚಿಕೊಂಡು ಹೊಸ ವರ್ಷದಂದು ಮದುವೆ ಬಗ್ಗೆ ಸುಳಿವು ನೀಡಿದ್ದರು ಅದಿತಿ ರಾವ್. ಎಂಗೇಜ್ ಮೆಂಟ್ ಮಾಡಿಕೊಂಡಿರವ ಜೋಡಿ ಸದ್ಯದಲ್ಲೇ ಹಸೆಮಣೆ ಏರಲಿದೆ.