ಬೆಂಗಳೂರು: ಕೇವಲ ಇದೊಂದೇ ಪ್ರಕರಣ ಅಲ್ಲ, ಎಲ್ಲ ಕೇಸ್ ಗಳನ್ನೂ ರಿವ್ಯೂ ಮಾಡುವ ಸಂದರ್ಭದಲ್ಲಿ ಈ ಪ್ರಕರಣದ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಕಾರ್ಯಕರ್ತರ ಬಂಧನ ವಿಚಾರವಾಗಿ ಮಾತನಾಡಿದರು. ಬಿಜೆಪಿಯವರು ಸರ್ಕಾರ ನಡೆಸಿದ್ದಾರೆ ಹಾಗೂ ಬಿಎಸ್ ಯಡಿಯೂರಪ್ಪ ನವರೂ ಸರ್ಕಾರ ನಡೆಸಿದ್ದಾರೆ.
ಕೇವಲ ಇದೊಂದೇ ಪ್ರಕರಣ ಅಲ್ಲ, ಎಲ್ಲ ಕೇಸ್ ಗಳನ್ನೂ ರಿವ್ಯೂ ಮಾಡುವ ಸಂದರ್ಭದಲ್ಲಿ ಈ ಪ್ರಕರಣದ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ ಎಂದರು. ಬಿಜೆಪಿ ನಾಯಕರು ವಿನಾ ಕಾರಣ ರಾಜಕೀಯ ಉದ್ದೇಶದಿಂದ ಟೀಕೆ ಮಾಡಬಾರದು. ಪೊಲೀಸರು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಂಡಿದ್ದಾರೆ. ಹಾಗಾದರೆ, ಬಾಕಿ ಉಳಿದ ಪ್ರಕರಣಗಳಲ್ಲಿ ಅರೆಸ್ಟ್ ಆದವರು ಹಿಂದೂಗಳಲ್ವಾ? ಅವರಿಗೊಂದು ನ್ಯಾಯ ಇವರಿಗೊಂದು ನ್ಯಾಯವಾ? ಎಂದು ಪರಮೇಶ್ವರ್ ಪ್ರಶ್ನಿಸಿದರು.
Post Office Recruitment: ಅಂಚೆ ಇಲಾಖೆಯಲ್ಲಿ ಸುವರ್ಣಾವಕಾಶ..! ಇಂದೇ ಅರ್ಜಿ ಸಲ್ಲಿಸಿ: ವೇತನ 20 ಸಾವಿರ!
ಕಾನೂನು ಪ್ರಕಾರ ಏನು ಆಗುತ್ತದೆಯೋ ಆಗುತ್ತದೆ. ಇದು ಕೇವಲ ಹುಬ್ಬಳ್ಳಿಯಲ್ಲಿ ಮಾತ್ರವಲ್ಲ, ಎಲ್ಲ ಕಡೆಯೂ ಹಳೆಯ ಕೇಸ್ ರಿವ್ಯೂ ಮಾಡ್ತಿದ್ದೇವೆ. ಈ ಕಡೆಯಾದರೂ ನ್ಯಾಯ ಆಗಬೇಕು ಅಥವಾ ಆ ಕಡೆಯಾದರೂ ಆಗಬೇಕು. 30 ವರ್ಷಗಳ ಹಿಂದಿನ ಪ್ರಕರಣಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಬಂಧನ ಆಗಿದ್ದು ಕಾಕತಾಳೀಯ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.