ಬೆಂಗಳೂರು:- ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ ಒಂದು ಹೊರ ಹೊಮ್ಮಿದೆ. ಇದೇ ತಿಂಗಳಲ್ಲಿ ಒಂದು ದಿನ ಕರ್ನಾಟಕದಲ್ಲಿ ಎಣ್ಣೆ ಮಾರಾಟ ನಿಷೇಧ ಮಾಡಲಾಗಿದೆ.
ಕೃಷ್ಣ ನಾಯ್ಕ್ʼರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದು ರಾಜಕೀಯ ದ್ವೇಷವೇ ಕಾರಣ: ಸುನಿಲ್ ಕುಮಾರ್
ಅಬಕಾರಿ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ ಎನ್ನಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಲಾಗಿದೆ.
ಈ ಬಗ್ಗೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಮಾತನಾಡಿ, ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂಎಸ್ಐಎಲ್ ಹೊರತುಪಡಿಸಿ ಎಲ್ಲಾ ಬಾರ್ಗಳು ಬಂದ್ ಎಂದರು.