ಬೆಂಗಳೂರು: ಮುಸ್ಲಿಂ ಧರ್ಮೀಯರ ಮತದಾನದ ಹಕ್ಕಿನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ.
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಂದ್ರಶೇಖರನಾಥ ಸ್ವಾಮೀಜಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ವಕ್ಫ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಮತದಾನದ ಹಕ್ಕಿಗೆ ಕೈ ಹಾಕಿದ್ದಾರೆ. ಮುಸ್ಲಿಮರಿಗೆ ಮತದಾನದ ಪವರ್ ಇಲ್ಲದಂತೆ ಮಾಡಿಬಿಡಬೇಕು ಅಂತಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ಎಚ್ಚರ.. ಎಚ್ಚರ.. ಶನಿವಾರ ಈ ಕೆಲಸಗಳನ್ನು ಮಾಡಿದ್ರೆ ಶನಿ ದೋಷ ಬರೋದು ಗ್ಯಾರಂಟಿ!
ವಿವಾದ ದೊಡ್ಡದಾಗುತ್ತಿದ್ದಂತೆ ಚಂದ್ರಶೇಖರನಾಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದರು. ಅದು ಬಾಯಿ ತಪ್ಪಿ ಆಡಿದ ಮಾತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.