ಕೃಷಿ ವಿಶ್ವವಿದ್ಯಾಲಯಗಳಲ್ಲಿ ಗುಣಾತ್ಮಕವಾಗಿ ಕಾರ್ಯಕ್ರಮ ಅನುಷ್ಠಾನಕ್ಕೆ ಕೃಷಿ ಸಚಿವರು ಸೂಚನೆ ನೀಡಿದರು..
ವಿಕಾಸ ಸೌಧದ ಸಮಿತಿ ಕೊಠಡಿಯಲ್ಲಿ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನೆ ನಡೆಸಿದ ಕೃಷಿ ಸಚಿವರು ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸೂಚಸಿದರು..
ಶೇ 100 ರಷ್ಟು ವಿಶ್ವವಿದ್ಯಾನಿಲಯ ಅನುದಾನ ಇರುವ ಹುದ್ದೆಗಳಿಗೆ ಆರ್ಥಿಕ ಇಲಾಖೆಗೆ ಕೇವಲ ಮಾಹಿತಿ ನೀಡಿ ನೇಮಕಾತಿ
ಮಾಡಿಕೊಳ್ಳುಲು ಅನುಕೂಲವಾಗುವಂತೆ ಸೂಕ್ತ ಮಾರ್ಗಸೂಚಿ ಹೊರಡಿಸಬೇಕಿದೆ ಎಂದು ಸಚಿವರು ಸೂಚಿಸಿದರು..
ಕೃಷಿ ವಿಶ್ವವಿದ್ಯಾನಿಲಯಗಳು ಹಾಗೂ ಸಚಿವಾಲಯದ ನಡುವೆ ಸೂಕ್ತ ಸಮನ್ವಯ ಅಗತ್ಯವಿದೆ ಎಂದು ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳಿಗೆ ಸಚಿವರು ತಿಳಿಸಿದರು..