ರಾಮನಗರ : ಡಾ.ಚಂದ್ರಮ್ಮ ದಯಾನಂದ ಸಾಗರ್ ಇನ್ಸ್ಟಿಟ್ಯೂಟರ್ ಆಫ್ ಮೆಡಿಕಲ್ ಎಜುಕೇಷನ್ ಆ್ಯಂಡ್ ರಿಸರ್ಜ್ ಕಾಲೇಜಿನಲ್ಲಿ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಣ್ಣೂರಿನ ಅನಾಮಿಕ (19) ಮೃತಳಾಗಿದ್ದು, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ವಿನುತಾ ತಮ್ಮ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ಧಾರೆ.
ಆತ್ಮಹತ್ಯೆಗೆ ಮಾನಸಿಕ ಒತ್ತಡವೇ ಕಾರಣ ಎಂದು ಹೇಳಲಾಗುತ್ತಿದೆ.. ಪೋಷಕರು ನೀಡಿದ ದೂರಿನ ಮೇರೆಗೆ ಹಾರೋಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಅನಾಮಿಕ ಸಾವಿಗೆ ಮಾನಸಿಕ ಒತ್ತಡ ಕಾರಣವಾಗಿದ್ದು, ಇದಕ್ಕೆ ಅಡಳಿತ ಮಂಡಳಿ ಕಾರಣವೆಂದು ಕಾಲೇಜು ಆಡಳಿತ ಮಂಡಳಿ ವಿರುದ್ಧ ದಿಕ್ಕಾರ ಕೂಗುತ್ತ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.