ಬೆಂಗಳೂರು:- ಸಂಸದ ಪ್ರಜ್ವಲ್ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿ ತೆರೆಯಲಾಗಿದೆ.
IPL 2024: ಒಂದು ಕಡೆ ಗೆಲ್ತಿದ್ರೂ RCB ಫ್ಯಾನ್ಸ್ ಗೆ ಮುಗಿಯುತ್ತಿಲ್ಲ ಟೆನ್ಷನ್…!
ಯಾರೇ ಸಂತ್ರಸ್ತರು ಹಾಗೂ ಭಾತ್ಮೀದಾರಿದ್ದಲ್ಲಿ ಅವರಿಗೆ ಕಾನೂನು ನೆರವು, ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾಗಿದ್ದಲ್ಲಿ ಸಹಾಯವಾಣಿ ಸಂಖ್ಯೆ 6360938947 ಕರೆ ಮಾಡುವಂತೆ ಎಸ್ಐಟಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ
ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರು, ನಾನವಳಲ್ಲ ಎಂಬ ಉತ್ತರವನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕೆಲ ಸಂತ್ರಸ್ತೆಯರು ಮರ್ಯಾದೆಗೆ ಹೆದರಿ ವಿಚಾರಣೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಸಂಸ್ರಸ್ತೆರಿಗಾಗಿ ಸಹಾಯವಾಣಿ ಆರಂಭಿಸಿದೆ.
ಇಂದು ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮೊದಲೇ ಸಂತ್ರಸ್ತೆ ಮಹಿಳೆಯಿಂದ ಮಾಹಿತಿ ಮತ್ತು ಹೇಳಿಕೆಯನ್ನು ಪಡೆದಿದ್ದಾರೆ. ಈ ಹೇಳಿಕೆ ಪ್ರಕರಣದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಒಂದು ವೇಳೆ ಮಹಿಳೆ ಕಿಡ್ನಾ ಮಾಡಿ ತನಗೆ ಬೆದರಿಕೆ ಹಾಕಿದ್ದರು. ತನ್ನ ಮೇಲೆ ಅತ್ಯಾಚಾರ ಆಗಿದೆ ಈ ವಿಚಾರ ಹೊರ ಬಾರದಂತೆ ತಡೆದರು ಎಂದು ಹೇಳಿಕೆ ನೀಡಿ ಸಾಕ್ಷಾ ನೀಡಿದ್ದರೇ ರೇವಣ್ಣ ಕುಟುಂಬಕ್ಕೆ ಸಂಕಷ್ಟ ಎದುರಾಗಲಿದೆ