ಬೆಂಗಳೂರು:- ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ಎಲ್ಲಿದ್ದಾನೆ ? ಯಾವಾಗ ಬರಹುದು? ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಚರ್ಚೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಿದ್ದು, ಸುಮಾರು ಒಂದೂವರೆ ಗಂಟೆ ಚರ್ಚೆ ನಡೆಸಿದರು. ಈ ವೇಳೆ ಪ್ರಕರಣದ ಆಗು ಹೋಗುಗಳ ಬಗ್ಗೆ ಅಧಿಕಾರಿಗಳು, ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದರು. ಬ್ಲೂ ಕಾರ್ನರ್ ನೋಟಿಸ್ ನೀಡುವಂತೆ ಸಿಬಿಐಗೆ ಎಸ್ಐಟಿ ಮನವಿ ಮಾಡಿದೆ. ಆದ್ರೆ, ಸಿಬಿಐನಿಂದ ಸೂಕ್ತ ಪ್ರತಿಕ್ರಿಯೆ ಬಂದಿಲ್ಲ ಎಂದು ಆಧಿಕಾರಿಗಳು, ಸಿಎಂ ಗಮನಕ್ಕೆ ತಂದಿದ್ದಾರೆ.
ಮೆಡಿಕಲ್ ಸೀಟು ಹಂಚಿಕೆಯಲ್ಲಿ 800 ಕೋಟಿ ಹಗರಣ: ಮಲ್ಲಿಕಾರ್ಜುನ ಖರ್ಗೆ ಅಳಿಯನ ವಿರುದ್ಧ ಸಿಐಡಿಗೆ ದೂರು..!
ಇನ್ನು ಪ್ರಜ್ವಲ ರೇವಣ್ಣ ಅವರನ್ನು ಕರೆತರಲು ಅಧಿಕಾರಿಗಳ ತಂಡ ವಿದೇಶಕ್ಕೆ ತೆರಳಲು ಸಜ್ಜಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಸ್ಯಾಂಟ್ರೋ ರವಿ ಕೇಸ್ ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಕೆಲವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಪ್ರಜ್ವಲ್ ಪೆನ್ಡ್ರೈವ್ ಕೇಸ್ಗೆ ಈ ಅಧಿಕಾರಿಗಳನ್ನು ಬಳಸಿಕೊಂಡು ವಿದೇಶಕ್ಕೆ ಕಳಿಸಲಾಗುತ್ತದೆ. ಇವತ್ತು ಅಥವಾ ನಾಳೆ ವಿದೇಶಕ್ಕೆ ತೆರಳಲು ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ
ಇತ್ತ ಪ್ರಜ್ವಲ್ ರೇವಣ್ಣನಿಗಾಗಿ ಎಸ್ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಕಾದು ಕುಳಿತ್ತಿದ್ದಾರೆ. ಎರಡು ದಿನಗಳಿಂದ ಪ್ರಜ್ವಲ್ ರೇವಣ್ಣ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ಜರ್ಮನಿಯಿಂದ ದುಬೈಗೆ ಹೋಗಿದ್ದಾರೆಂಬ ಮಾಹಿತಿ ಕಲೆಹಾಕಿರುವ ಎಸ್ಐಟಿ ಟೀಂ ದುಬೈನಿಂದ ಬರುವ ಎಲ್ಲಾ ವಿಮಾನಗಳ ಪ್ರಯಾಣಿಕರ ಲಿಸ್ಟ್ ಚೆಕ್ ಮಾಡುತ್ತಿದ್ದಾರೆ. ಮಾತ್ರವಲ್ಲದೆ ಪ್ರಜ್ವಲ್ ಲೊಕೇಶನ್ ಟ್ರ್ಯಾಕ್ ಮಾಡಿದ್ದಾರೆ. ಮೂಲಗಳ ಪ್ರಕಾರ ಇಂದು ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರುವ ಸಾಧ್ಯತೆಯಿದೆ. ಅಧಿಕಾರಿಗಳಂತೂ ವಿದೇಶಗಳಿಂದ ಬರುವ ಎಲ್ಲಾ ವಿಮಾನಗಳ ಮೇಲೆ ನಿಗಾ ಇಟ್ಟಿದ್ದಾರೆ