ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಹಂಚಿದ ಆರೋಪದ ಮೇಲೆ ನವೀನ್ ಗೌಡ ಎಂಬಾತನಿಗೆ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ. ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪದ ಮೇಲೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್ ಗೌಡನನ್ನ ಎಸ್ಐಟಿ ವಿಚಾರಣೆಗೆ ಕರೆದಿದೆ.
ಮೇ.4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಜೊತೆಗೆ ಖುದ್ದು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೂಡ ಕೊಟ್ಟಿದ್ದಾರೆ. ಈಗಾಗಲೇ ನವೀನ್ ಗೌಡ ಫೋನ್ನಲ್ಲಿ ಪ್ರಾಥಮಿಕ ಮಾಹಿತಿ ನೀಡಿದ್ದು, ಈ ವೇಳೆ ನಾನು ಪೆನ್ಡ್ರೈವ್ ಹಂಚಿಕೆ ಮಾಡಿಲ್ಲ ಎಂದು ಹೇಳಿದ್ದಾನೆ.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಈ ನಡುವೆ ಇಂದು ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಜಗತ್ತಿನ ಎಲ್ಲಾ ವಿಮಾನ ನಿಲ್ದಾಣಗಳಿಗೂ ನೋಟಿಸ್ ರವಾನಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.