ಬೆಂಗಳೂರು:- ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್ಐಟಿ ಪತ್ರ ಬರೆದಿದೆ.
ಈ ಕೂಡಲೇ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ