ಮಂಡ್ಯ: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಶ್ರೀರಂಗ ಪಟ್ಟಣ ನ್ಯಾಯಾಲಯ ಜಮೀನು ಮಂಜೂರು ಮಾಡಿದೆ. ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ನೀಡಿದ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿತ್ತು.
ಡಿಸೆಂಬರ್ 24 ರಂದು ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಿಕಾರಿಗಳನ್ನು ಉದ್ದೇಶಿಸಿ ಮುಸ್ಲಿಮರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಮಹಿಳೆಯರನ್ನು ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ,
ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನ ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿರುವ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ನಜ್ಮಾ ನಝೀರ್ ದೂರು ನೀಡಿದ್ದರು.
ಪ್ರಭಾಕರ ಭಟ್ ಹೇಳಿದ್ದೇನು?
ಹಿಂದೆ ತಲಾಖ್ ತಲಾಖ್ ಎಂದು ಹೇಳಿ ಮುಸ್ಲಿಂ ಗಂಡಂದಿರು ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗುತ್ತಿದ್ದ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ.
ಹಿಜಬ್ ಧರಿಸಲು ಅನುಮತಿ ಕೊಟ್ಟರೆ ನಾವು ಕೇಸರಿ ಶಾಲು, ಟೋಪಿ ಧರಿಸುತ್ತೇವೆ. ನಾವು ಶಾಲೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗ್ತೀವಿ. ನೀವು ತಾಕತ್ತಿದ್ದರೆ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ ಎಂದು ಸವಾಲು ಹಾಕಿದ್ದರು.