ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಮತ ಸಮರಕ್ಕೆ ನಾಳೆಯಿಂದ ಅಧಿಕೃತ ಚಾಲನೆ ಸಿಗಲಿದೆ. ಒಟ್ಟು ಎರಡು ಹಂತಗಳಲ್ಲಿ ನಡೆಯುವ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8 ರಂದು ನಾಮಪತ್ರ (ಉಮೇದುವಾರಿಕೆ) ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ (ಫಲಿತಾಂಶ) ಪ್ರಕಟವಾಗಲಿದೆ.
ಏ.26ರಂದು ಈ ಜಿಲ್ಲೆಗಳಲ್ಲಿ ಮತದಾನ
ರಾಜ್ಯದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದಲ್ಲಿ 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರದಲ್ಲಿ ಚುನಾವಣೆ ನಡೆಯಲಿದೆ.
ಲೋಕಸಭಾ ಚುನಾವಣಾ ವೇಳಾಪಟ್ಟಿ
ಮೊದಲ ಹಂತ
ಚುನಾವಣೆ ಘೋಷಣೆ : ಮಾರ್ಚ್ 16, 2024
ಅಧಿಸೂಚನೆ ಪ್ರಕಟ : ಮಾರ್ಚ್ 28, 2024
ನಾಮಪತ್ರ ಸಲ್ಲಿಕೆಗೆ ಕೊನೆ ದಿನ : ಏಪ್ರಿಲ್ 04, 2024
ನಾಮಪತ್ರ ಪರಿಶೀಲನೆ : ಏಪ್ರಿಲ್ 05, 2024
ನಾಮಪತ್ರ ವಾಪಸ್ಗೆ ಕೊನೆ ದಿನ : ಏಪ್ರಿಲ್ 08, 2024
ಮತದಾನ : ಏಪ್ರಿಲ್ 26, 2024
ಫಲಿತಾಂಶ : ಜೂನ್ 4, 2024
ಎರಡನೇ ಹಂತ
ಚುನಾವಣೆ ಘೋಷಣೆ : ಮಾರ್ಚ್ 16, 2024
ಅಧಿಸೂಚನೆ ಪ್ರಕಟ : ಏಪ್ರಿಲ್ 12, 2024
ನಾಮಪತ್ರ ಸಲ್ಲಿಕೆಗೆ ಕೊನೆ ದಿನ : ಏಪ್ರಿಲ್ 19, 2024
ನಾಮಪತ್ರ ಪರಿಶೀಲನೆ : ಏಪ್ರಿಲ್ 20, 2024
ನಾಮಪತ್ರ ವಾಪಸ್ಗೆ ಕೊನೆ ದಿನ : ಏಪ್ರಿಲ್ 22, 2024
ಮತದಾನ : ಮೇ 7, 2024
ಫಲಿತಾಂಶ : ಜೂನ್ 4, 2024