ಬೆಂಗಳೂರು;- ಸರ್ಕಾರದ ವೈಫಲ್ಯದಿಂದಲೇ ಅಧಿಕಾರಿಗಳ ಹತ್ಯೆಯಾಗ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಜನಸಾಮಾನ್ಯರಿಗೆ ರಕ್ಷಣೆ ಇಲ್ಲ. ರಾಜ್ಯದ ಹಿರಿಯ ಅಧಿಕಾರಿಯನ್ನ ಮೆನೆಗೆ ಹೋಗಿ ಹತ್ಯೆ ಮಾಡಿದ್ದಾರೆ. ಇಂತಹ ಉದ್ಧಟತನ ತೋರುವ ಕೆಲಸ ಆಗ್ತಿದೆ. ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ. ಇಂತಹ ವಾತಾವರಣ ಇದ್ರೆ ಯಾವ ಅಧಿಕಾರಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯ. ಸರ್ಕಾರ ಕಠಿಣವಾದ ಕ್ರಮ ಕೈಗೊಳ್ಳಬೇಕು. ಕಿಡಿಗೇಡಿಗಳಿಗೆ ಯಾವುದೇ ಲಂಗುಲಗಾಮು ಇಲ್ಲ. ಗೃಹ ಇಲಾಖೆ ವೈಫಲ್ಯ ಎದ್ದು ಕಾಣ್ತಿದೆ. ಯಾವಯಾವ ಭಾಗದಲ್ಲಿ ಏನೇನು ನಡೆಯುತ್ತೆ ಅಂತ ಪೊಲೀಸ್ ಇಲಾಖೆಗೆ ಮಾಹಿತಿ ಇರುತ್ತದೆ. ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣ ಇಲ್ಲ. ವರ್ಗಾವಣೆ ಮಾಡಿ ಹಣವಸೂಲಿ ಮಾಡ್ತಾ ನಿಂತಿದ್ರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರಾ? ಸರ್ಕಾರದ ನಡೆಯಿಂದಲೇ ಇಂತಹ ಘಟನೆ ಜರುಗುತ್ತಿದೆ ಎಂದು ಕಿಡಿಕಾರಿದರು.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದನ್ನ ಕಾಂಗ್ರೆಸ್ ಅವರು ಹೇಳಬೇಕು. ಲೋಕ ಸಭೆ ಚುನಾವಣೆ ಆದ ಮೇಲೆ ಬಿಜೆಪಿ- ಜೆಡಿಎಸ್ ಈ ರಾಜ್ಯದಲ್ಲಿ ಇರೋದೆ ಇಲ್ಲ ಅಂತ ಪ್ರಿಯಾಂಕ್ ಖರ್ಗೆ ಮೊನ್ನೆ ಹೇಳಿದ್ದಾರೆ. ಆದರೆ, ಈಗ ನಾನು ಪ್ರಿಯಾಂಕಾ ಖರ್ಗೆ ಹೇಳಲು ಭಯಸುತ್ತೇನೆ. ಪಾರ್ಲಿಮೆಂಟ್ ಚುನಾವಣೆ ಆದ ಮೇಲೆ ಈ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಕಾಂಗ್ರೆಸ್ ಇರುತ್ತಾ ಯೋಚನೆ ಮಾಡಲಿ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟಾಂಗ್ ನೀಡಿದರು.