ಕೋಲಾರ : ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೋಲಾರದಲ್ಲಿ ಬಿಜೆಪಿ – ಜೆಡಿಎಸ್ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ ನಡೆದಿದೆ.
Bagalakote: ಇಂಧನ ದರ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ..!
ನಗರದ ಗಾಂಧಿ ವನದಿಂದ ಮೆಕ್ಕೆ ವೃತ್ತದವರೆಗೂ ಪಂಜಿನ ಮೆರವಣಿಗೆ ನಡೆದಿದೆ. ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಾಜ್ಯ ಸರ್ಕಾರ ಕ್ರಮವನ್ನು ಕಾರ್ಯಕರ್ತರು ಖಂಡಿಸಿದ್ದಾರೆ. ಗ್ಯಾರೆಂಟಿಗಳಿಗೆ ಹಣ ಒದಗಿಸಲು ಜನರ ಮೇಲೆ ಹೊರೆ ಹಾಕುತ್ತಿದೆ. ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಿಂದ ಎಲ್ಲಾ ಸಾಮಾನುಗಳ ಬೆಲೆ ಏರಿಕೆಯಾಗಲಿದೆ. ರಾಜ್ಯ ಸರ್ಕಾರ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದರು.