ಬೆಂಗಳೂರು: ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ದೇವರ ಹುಂಡಿಗೆ ಚಿತ್ರ-ವಿಚಿತ್ರ ಕೊರಿಕೆಯ ಪತ್ರಗಳನ್ನ ಹಾಕಿರುವುದು ಕಂಡುಬಂದಿದೆ. ಇದನ್ನ ಕಂಡು ದೇವಸ್ಥಾನ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿ ನಕ್ಕಿದ್ದಾರೆ.
ಐಎಎಸ್ ಅಧಿಕಾರಿ ಜೊತೆಗೇ ಮದ್ವೆ ಮಾಡ್ಸು:
“ಅಮ್ಮ ನಾನು ತಪ್ಪು ಮಾಡಿದೀನಿ ಕ್ಷಮಿಸಿ, ಹಿಂದೆ ಪತ್ರ ಬರೆದಾಗ ನಾನು ಗೋಪಿನಾಥ್ ಬಿಟ್ರೆ ಯಾರನ್ನೂ ಬೇರೆ ಯಾರನ್ನೂ ಮದುವೆಯಾಗದಂತೆ ಆಗದಂತೆ ಬಯಸಿದ್ದೆ. ಈಗ ಅವನು ನನಗೆ ಬೇಡ. ಆದಷ್ಟು ಬೇಗ ಮುಂದಿನ ವರ್ಷದಷ್ಟರಲ್ಲಿ ನನ್ನ ಮದುವೆ ಆಗುವಂತೆ ಮಾಡು. ಒಳ್ಳೆಯ ಹೆಸರು, ಕೀರ್ತಿ, ಹೃದಯವಂತ, ಗುಣವಂತ, ಸಿರಿವಂತ, ಐಶ್ವರ್ಯವಂತ ಹುಡುಗ ಆಗಿರಬೇಕು,
![Demo](https://ainlivenews.com/wp-content/uploads/2023/12/spoorthi-1.jpg)
500 Note Update: ನಿಮ್ಮ ಬಳಿ 500 ರೂಪಾಯಿ ನೋಟು ಇದ್ಯಾ..? ಕ್ಷಣಮಾತ್ರದಲ್ಲಿ ನೀವು ಆಗ್ಬೋದು ಮಿಲಿಯನೇರ್
ಯಾವ ಹೀರೋಗೂ ಕಡಿಮೆ ಇರಬಾರದು. ಅಷ್ಟು ಚೆನ್ನಾಗಿರೋ ಒಳ್ಳೆಯ ಐಎಎಸ್ ಅಧಿಕಾರಿ ಜೊತೆ ನನ್ನ ಮದುವೆ ಮಾಡಿಸು. ನನ್ನ ಗಂಡ ಬೇರೆ ಯಾವ ಹೆಂಗಸರನ್ನು, ಹುಡುಗಿಯರನ್ನು ಕೆಟ್ಟ ದೃಷ್ಟಿಯಿಂದ ನೋಡಬಾರದು, ನನ್ನನ್ನ ಹೆಚ್ಚಾಗಿ ಪ್ರೀತಿ ಮಾಡಬೇಕು. ನಾನಂದ್ರೆ ಅವರಿಗೆ ಜೀವ ಆಗಿರಬೇಕು. ನನಗೆ ಮಕ್ಕಳು, ಮೊಮ್ಮಕ್ಕಳ ಜೊತೆ ಜೀವನ ಮಾಡಬೇಕು ಇಷ್ಟು ವರ್ಷ ಕಾದಿದ್ದಕ್ಕೆ ಒಳ್ಳೆ ಹುಡುಗ ಸಿಕ್ಕಿದ ಅಂತ ಆಡಿಕೊಳ್ಳೋರ ಬಾಯಿ ಮುಚ್ಚಿಸಬೇಕು ಅಂತಾ ಹುಡುಗ ಕೊಡು ಅಂತೆಲ್ಲ ಚೀಟಿಗಳಲ್ಲಿ ಬರೆದು ಹುಂಡಿಗೆ ಹಾಕಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)