ಶಿವಮೊಗ್ಗ:- ನಗರದ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ರೌಡಿಶೀಟರ್ ಕೊಲೆಗೈದ ಘಟನೆ ಜರುಗಿದೆ
ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!
38 ವರ್ಷದ ರಾಜೇಶ್ ಶೆಟ್ಟಿ ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ರಾಜೇಶ್ ಬೊಮ್ಮನಕಟ್ಟೆಯ ಅಂಗಡಿ ಬಳಿ ಕೂಲ್ ಡ್ರಿಂಕ್ಸ್ ಕುಡಿಯುತ್ತ ಕುಳಿತಿದ್ದ. ಅಲ್ಲಿಗೆ ಬಂದ ದುಷ್ಕರ್ಮಿಗಳ ತಂಡ ಏಕಾಏಕಿ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹಾಗೂ ವಿನೋಬನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.