ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಮೊದಲ ಒಮ್ರಿಕಾನ್ ಪ್ರಕರಣ ಪತ್ತೆಯಾಗಿದೆ. ವಿದೇಶದಿಂದ ಆಗಮಿಸಿದ್ದ 9 ವರ್ಷದ ಮಗುವಿಗೆ ಸೋಂಕು ದೃಢಪಟ್ಟಿದೆ. ಈ ಮಗುವಿಗೆ ಸೋಂಕಿನ ಯಾವುದೇ ಲಕ್ಷಣಗಳಿರಲಿಲ್ಲ. ಸದ್ಯ ಮಗುವನ್ನು ಪ್ರತ್ಯೇಕವಾಗಿ ಇರಿಸಲಾಗಿದ್ದು, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ತಪಾಸಣೆ ಮಾಡಲಾಗುತ್ತಿದೆ.
